ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡೀಗಢ ಮಹಾನಗರ ಪಾಲಿಕೆ: ಹಿರಿಯ ಉಪಮೇಯರ್ ಹುದ್ದೆ ಬಿಜೆಪಿ ತೆಕ್ಕೆಗೆ

Published 4 ಮಾರ್ಚ್ 2024, 7:32 IST
Last Updated 4 ಮಾರ್ಚ್ 2024, 7:32 IST
ಅಕ್ಷರ ಗಾತ್ರ

ಚಂಡೀಗಢ: ಚಂಡೀಗಢ ಮಹಾನಗರ ಪಾಲಿಕೆಯ ಹಿರಿಯ ಉಪಮೇಯರ್ ಹುದ್ದೆಗೆ ಸೋಮವಾರ ನಡೆದ ಮರು ಮತದಾನದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕುಲ್‌ಜೀತ್ ಸಂಧು ಅವರು ಹಿರಿಯ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಸಂಧು ಪರ 19 ಮತಗಳು ಬಿದ್ದರೆ, ಕಾಂಗ್ರೆಸ್‌ನ ಗುರುಪ್ರೀತ್ ಗಬು ಅವರು 16 ಮತ ಪಡೆದರು. ಒಂದು ಮತವನ್ನು ಅನರ್ಹ ಎಂದು ಘೋಷಿಸಲಾಯಿತು.

35 ಮಂದಿ ಸಂಖ್ಯಾಬಲದ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 17 ಕೌನ್ಸಿಲರ್‌ಗಳನ್ನು ಹೊಂದಿದೆ. ಫೆ.19ರಂದು ಆಮ್‌ ಆದ್ಮಿ ಪಕ್ಷದ ಮೂವರು ಕೌನ್ಸಿಲರ್‌ಗಳು ಬಿಜೆಪಿ ಸೇರಿದ್ದರಿಂದ ಪಕ್ಷದ ಬಲ 14ರಿಂದ 17ಕ್ಕೆ ಏರಿಕೆಯಾಗಿತ್ತು. ಆಮ್ ಆದ್ಮಿ 10, ಕಾಂಗ್ರೆಸ್ 7 ಹಾಗೂ ಶಿರೋಮಣಿ ಅಕಾಲಿದಳ ಓರ್ವ ಕೌನ್ಸಿಲರ್‌ಗಳನ್ನು ಹೊಂದಿವೆ.

ಜನವರಿ 30ರಂದು ನಡೆದ ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಚುನಾವಣಾಧಿಕಾರಿ ಮತಪತ್ರಗಳನ್ನು ತಿದ್ದಿದ್ದಾರೆ ಎಂದು ಆರೋಪಿಸಿ ಎಎಪಿ ಹಾಗೂ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಫೆಬ್ರುವರಿ 20 ರಂದು ಫಲಿತಾಂಶಗಳನ್ನು ರದ್ದುಗೊಳಿಸಿತ್ತು. ಎಎಪಿ-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಕುಲದೀಪ್ ಕುಮಾರ್ ಅವರನ್ನು ಮೇಯರ್ ಆಗಿ ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT