ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರ ಪ್ರದೇಶ: ನಾಮಪತ್ರ ಸಲ್ಲಿಸಿದ ಚಂದ್ರಬಾಬು ನಾಯ್ಡು, ಬಿಜೆಪಿಯ ಪುರಂದೇಶ್ವರಿ

Published 19 ಏಪ್ರಿಲ್ 2024, 13:17 IST
Last Updated 19 ಏಪ್ರಿಲ್ 2024, 13:17 IST
ಅಕ್ಷರ ಗಾತ್ರ

ಅಮರಾವತಿ (ಆಂಧ್ರ ಪ್ರದೇಶ): ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಟಿಡಿಪಿ ವರಿಷ್ಠ ಎನ್. ಚಂದ್ರಬಾಬು ನಾಯ್ಡು ಮತ್ತು ಆಂಧ್ರ ಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷೆ ಡಿ. ಪುರಂದೇಶ್ವರಿ ಅವರು ಇಂದು (ಶುಕ್ರವಾರ) ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರ ಪರವಾಗಿ, ಪತ್ನಿ ನಾರಾ ಭುವನೇಶ್ವರಿ ಕುಪ್ಪಂನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಟಿಡಿಪಿ ಪ್ರಕಟಣೆ ತಿಳಿಸಿದೆ.

ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಭುವನೇಶ್ವರಿ ಕುಪ್ಪಂನಲ್ಲಿ ಟಿಡಿಪಿ ಗೆಲುವನ್ನು ಖಚಿತಪಡಿಸಿಕೊಳ್ಳುವಂತೆ ಬೇಡಿಕೊಂಡಿದ್ದಾರೆ.

ರಾಜಮಹೇಂದ್ರವರಂ ಲೋಕಸಭಾ ಕ್ಷೇತ್ರದಿಂದ ಪುರಂದೇಶ್ವರಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಬಿಜೆಪಿಯ ಹಿರಿಯ ನಾಯಕ ವಿ. ಕೆ ಸಿಂಗ್‌ ಅವರು ಜೊತೆಗಿದ್ದರು.

ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಪಕ್ಷಗಳು ಎನ್‌ಡಿಎ ಮೈತ್ರಿಕೂಟದ ಭಾಗವಾಗಿವೆ. ಮೇ 13ರಂದು ಆಂಧ್ರಪ್ರದೇಶದಲ್ಲಿ ಏಕಕಾಲಕ್ಕೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT