ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರಪ್ರದೇಶ: ದೇಣಿಗೆ ಸಂಗ್ರಹಕ್ಕಾಗಿ ವೆಬ್‌ಸೈಟ್ ಆರಂಭಿಸಿದ ಟಿಡಿಪಿ

Published 10 ಏಪ್ರಿಲ್ 2024, 12:58 IST
Last Updated 10 ಏಪ್ರಿಲ್ 2024, 12:58 IST
ಅಕ್ಷರ ಗಾತ್ರ

ಅಮರಾವತಿ: ಚುನಾವಣೆಯಲ್ಲಿ ಆಂಧ್ರಪ್ರದೇಶ ರಾಜ್ಯಕ್ಕೆ ತೆಲುಗು ದೇಶಂ (ಟಿಡಿಪಿ) ಪಕ್ಷದ ಗೆಲುವು ಮುಖ್ಯ ಎಂದು ಪ್ರತಿಪಾದಿಸಿರುವ ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು, ರಾಜ್ಯದ ಜನರು ಪಕ್ಷಕ್ಕೆ ದೇಣಿಗೆ ನೀಡಬೇಕೆಂದು ಕೋರಿದ್ದು ಈ ನಿಟ್ಟಿನಲ್ಲಿ ವೆಬ್‌ಸೈಟ್ ಆರಂಭಿಸಿದ್ದಾರೆ.

ಈ ಬಗ್ಗೆ ‘ಎಕ್ಸ್‌’ ವೇದಿಕೆಯಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಜ್ಯದ ಬೆಳವಣಿಗೆಗಾಗಿ, ನಮ್ಮ ಮಕ್ಕಳ ಭವಿಷ್ಯಕ್ಕಾಗಿ ಮತ್ತು ತೆಲುಗು ದೇಶಂಗಾಗಿ ನಾವು ವೆಬ್‌ಸೈಟ್‌ ಹೊರತಂದಿದ್ದು, ಇದರ ಮೂಲಕ ನೀವು ಸುಲಭವಾಗಿ ದೇಣಿಗೆ ನೀಡಬಹುದಾಗಿದೆ’ ಎಂದು ತಿಳಿಸಿದ್ದಾರೆ.

ನಾಯ್ಡು ಅವರು ಪಕ್ಷಕ್ಕೆ ₹99,999 ದೇಣಿಗೆ ನೀಡಿದ್ದಾರೆ. ರಾಜ್ಯವನ್ನು ಪುನರ್ ನಿರ್ಮಿಸಲು ಶ್ರಮಿಸುತ್ತಿರುವ ಪಕ್ಷಕ್ಕೆ ಇದು ಬಲ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT