ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Chandrayaan-3 Landing: ದ.ಆಫ್ರಿಕಾದಿಂದಲೇ ಪ್ರಧಾನಿ ಮೋದಿ ಚಂದ್ರಯಾನ-3 ವೀಕ್ಷಣೆ

Published 23 ಆಗಸ್ಟ್ 2023, 10:40 IST
Last Updated 23 ಆಗಸ್ಟ್ 2023, 10:40 IST
ಅಕ್ಷರ ಗಾತ್ರ

ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯೋಜನೆಯ 'ವಿಕ್ರಮ್' ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಅಂತಿಮ ಕ್ಷಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದಿಂದಲೇ ವೀಕ್ಷಿಸಲಿದ್ದಾರೆ.

ಸಂಜೆ 6 ಗಂಟೆ ಸುಮಾರಿಗೆ ಈ ಐತಿಹಾಸಿಕ ಪ್ರಕ್ರಿಯೆ ನಡೆಯಲಿದೆ. ಇಸ್ರೊ ಯೋಜನೆಗೆ ಈಗಾಗಲೇ ಶುಭಾಶಯ ಕೋರಿರುವ ಮೋದಿ, ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್‌ನ ನೇರಪ್ರಸಾರ ವೀಕ್ಷಿಸಲಿದ್ದಾರೆ.

ಪ್ರಧಾನಿ ಮೋದಿ ಅವರು 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾದ ಜೊಹಾನಸ್‌ಬರ್ಗ್ ಪ್ರವಾಸ ಕೈಗೊಂಡಿದ್ದಾರೆ.

ಭಾರತದ ಹೆಮ್ಮೆಯ ಚಂದ್ರಯಾನ-3 ಯೋಜನೆಯನ್ನು ಜಗತ್ತೇ ಕುತೂಹಲದಿಂದ ಕಾಯುತ್ತಿದೆ. ಇದಕ್ಕಾಗಿ ಇಸ್ರೊ ಅಭೂತಪೂರ್ವ ತಯಾರಿಯನ್ನು ನಡೆಸಿದೆ. ದೇಶದ ಜನರು ಮನೆಯಲ್ಲಿಯೇ ಕುಳಿತು ನೇರಪ್ರಸಾರ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ಚಂದ್ರನ ಮೇಲ್ಮೈಯಲ್ಲಿ ವಿಕ್ರಮ್ ಲ್ಯಾಂಡರ್ ಸ್ಪರ್ಶಿಸುವ ನೇರ ಪ್ರಸಾರವನ್ನು ಇಲ್ಲೂ ವೀಕ್ಷಿಸಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT