ಈ ಕುರಿತು ಟ್ವೀಟ್ ಮಾಡಿರುವ ಮಾಯಾತಿ ಅವರು, ‘ಬೆರಳೆಣಿಕೆಯಷ್ಟು ಜನರನ್ನು ಹೊರತುಪಡಿಸಿ, ದೇಶದ ಎಲ್ಲ ಜನರು ಹೆಚ್ಚಿನ ಹಣದುಬ್ಬರ, ಬಡತನ, ನಿರುದ್ಯೋಗ ಮುಂತಾದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗಳನ್ನು ಪರಿಹರಿಸುವ ಬದಲು, ಮತಾಂತರ, ಮರುನಾಮಕರಣ, ಬಹಿಷ್ಕಾರ ಮತ್ತು ದ್ವೇಷ ಭಾಷಣಗಳ ಮೂಲಕ ಜನರ ಗಮನವನ್ನು ಬೇರೆಡೆಗೆ ತಿರುಗಿಸುವುದು ಬೇಸರದ ಸಂಗತಿ’ ಎಂದು ತಿಳಿಸಿದ್ದಾರೆ.