ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌ನ 16ನೇ ಮುಖ್ಯಮಂತ್ರಿಯಾಗಿ ಚರಣ್‌ಜಿತ್ ಸಿಂಗ್ ಚನ್ನಿ ಪ್ರಮಾಣ ವಚನ ಸ್ವೀಕಾರ

ಮೊದಲ ದಲಿತ ಸಿ.ಎಂ ಅಧಿಕಾರಕ್ಕೆ
Last Updated 20 ಸೆಪ್ಟೆಂಬರ್ 2021, 19:34 IST
ಅಕ್ಷರ ಗಾತ್ರ

ಚಂಡೀಗಡ: ಕಾಂಗ್ರೆಸ್‌ ನಾಯಕ ಚರಣ್‌ಜಿತ್‌ ಸಿಂಗ್‌ ಚನ್ನಿಅವರು ಪಂಜಾಬ್‌ನ 16ನೇ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೇರಿದ ದಲಿತ ಸಮುದಾಯದ ಮೊದಲ ವ್ಯಕ್ತಿ ಅವರು.ರಾಜ್ಯಪಾಲ ಭನ್ವಾರಿಲಾಲ್‌ ಪುರೋಹಿತ್‌ ಅವರು ಪ್ರಮಾಣವಚನಬೋಧಿಸಿದರು.

ಸುಖ್‌ಜಿಂದರ್‌ ಸಿಂಗ್‌ ರಂಧಾವ ಮತ್ತು ಒ.ಪಿ. ಸೋನಿ ಅವರಿಗೆಹೊಸ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ಅಮರಿಂದರ್‌ ಸಿಂಗ್‌ ನೇತೃತ್ವದ ಈ ಹಿಂದಿನ ಸರ್ಕಾರದಲ್ಲಿ ಈ ಇಬ್ಬರೂ ಸಚಿವರಾಗಿದ್ದರು.

ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಚನ್ನಿ ಅವರು ಒತ್ತಾಯಿಸಿದ್ದಾರೆ. ‘ಕರಾಳ’ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರ ಜತೆಗೆ ಕಾಂಗ್ರೆಸ್ ಪಕ್ಷವು ಗಟ್ಟಿಯಾಗಿ ನಿಲ್ಲಲಿದೆ ಎಂದಿದ್ದಾರೆ.

ಸೋಮವಾರ ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ನಿಗದಿಯಾಗಿತ್ತು. ಆದರೆ, ಸ್ವಲ್ಪ ತಡವಾಗಿ ಕಾರ್ಯಕ್ರಮ ನಡೆಯಿತು. ಸೋನಿ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಿಕೆ ಬಗ್ಗೆ ಸಮಾರಂಭಕ್ಕೆ ಅಲ್ಪ ಮೊದಲು ನಿರ್ಧಾರ ಕೈಗೊಳ್ಳಲಾಯಿತು ಎಂದು ಹೇಳಲಾಗಿದೆ. ಕಾಂಗ್ರೆಸ್ ಸಂಸದ ರಾಹುಲ್‌ ಗಾಂಧಿ ಅವರು ಕಾರ್ಯಕ್ರಮದಲ್ಲಿಉಪಸ್ಥಿತರಿದ್ದರು.

ಪಂಜಾಬ್ ಕಾಂಗ್ರೆಸ್‌ ಘಟಕದ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಅವರು ಸಮಾರಂಭದಲ್ಲಿ ಇದ್ದರು. ಆದರೆ, ಭಿನ್ನಮತದ ಕಾರಣಕ್ಕೆ ಮುಖ್ಯಮಂತ್ರಿ ಹುದ್ದೆಗೆ ಶನಿವಾರ ರಾಜೀನಾಮೆ ನೀಡಿದ ಅಮರಿಂದರ್‌ ಅವರು ಗೈರುಹಾಜರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT