ಆಯೋಗದ ನಿರ್ಬಂಧದಿಂದಾಗಿ ರಾಜಕೀಯ ಪಕ್ಷಗಳ ನಾಯಕರು ರ‍್ಯಾಲಿಯಲ್ಲಿ ಭಾಗವಹಿಸುತ್ತಿಲ್ಲ. ಇದರಿಂದಾಗಿ ಬಾಡಿಗೆ ಹೆಲಿಕಾಪ್ಟರ್, ಲಘು ವಿಮಾನಗಳನ್ನು ಬಳಸುವವರು ಇಲ್ಲವಾಗಿದೆ. ಚುನಾವಣೆ ಸಮಯದಲ್ಲಿ ಹೆಚ್ಚಿನ ಬೇಡಿಕೆ ಇರುತ್ತಿತ್ತು. ಆದರೆ ನಿಷೇಧದಿಂದಾಗಿ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ ಎಂದು ಕ್ಲಬ್ ಒನ್ ಏರ್ ಸಿಇಒ ರಾಜನ್ ಮೆಹ್ರಾ ಸುದ್ದಿಸಂಸ್ಥೆ ‘ಪಿಟಿಐ‘ಗೆ ತಿಳಿಸಿದ್ದಾರೆ.