ನವದೆಹಲಿ: ಮಧ್ಯ ಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ 'ಜ್ವಾಲಾ' ಹೆಸರಿನ ಚೀತಾ ಸೋಮವಾರ ಐದು ಮರಿಗಳಿಗೆ ಜನ್ಮ ನೀಡಿದೆ. ಈ ಮರಿಗಳ ಜನನದಿಂದ ದೇಶದ ಒಟ್ಟು ಚೀತಾಗಳ ಸಂಖ್ಯೆ 53ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ.

ಕೆಲವೇ ದಿನಗಳ ಹಿಂದಷ್ಟೇ ಇದೇ ಉದ್ಯಾನವನದಲ್ಲಿ 'ಗಾಮಿನಿ' ಎಂಬ ಚೀತಾ ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು.

‘ಪ್ರಾಜೆಕ್ಟ್ ಚೀತಾ’ ಪಾಲಿಗೆ ಇದು ಹೆಮ್ಮೆಯ ಕ್ಷಣ. ನಮೀಬಿಯಾದಿಂದ ಭಾರತಕ್ಕೆ ತಂದಿದ್ದ ಜ್ವಾಲಾ ಹೆಸರಿನ ಚೀತಾ ಐದು ಮರಿಗಳಿಗೆ ಜನ್ಮ ನೀಡಿದೆ. ಈ ಮೂಲಕ ಭಾರತದಲ್ಲಿ ಜನಿಸಿದ ಚೀತಾ ಮರಿಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ’ ಎಂದು ಅವರು ಎಕ್ಸ್ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.

‘ಈ ಮರಿಗಳ ಆಗಮನದೊಂದಿಗೆ ಭಾರತದಲ್ಲಿನ ಒಟ್ಟು ಚೀತಾಗಳ ಸಂಖ್ಯೆ ಈಗ 53ಕ್ಕೆ ತಲುಪಿದೆ. ಇದು ವನ್ಯಜೀವಿ ಸಂರಕ್ಷಣೆಯ ದೃಷ್ಟಿಯಿಂದ ಐತಿಹಾಸಿಕ ಕ್ಷಣವಾಗಿದೆ’ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ, ಪಶುವೈದ್ಯರು, ಕ್ಷೇತ್ರ ಸಿಬ್ಬಂದಿ ಸೇರಿದಂತೆ ಯೋಜನೆಯಲ್ಲಿ ಭಾಗಿಯಾಗಿರುವ ಎಲ್ಲರನ್ನು ಸಚಿವರು ಶ್ಲಾಘಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.