ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಛತ್ತೀಸಗಢ: ಬಿಜಾಪುರದ ವಿವಿಧೆಡೆ 16 ಮಂದಿ ನಕ್ಸಲರ ಬಂಧನ

Published 30 ಮೇ 2024, 16:28 IST
Last Updated 30 ಮೇ 2024, 16:28 IST
ಅಕ್ಷರ ಗಾತ್ರ

ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯ ವಿವಿಧ ಭಾಗಗಳಿಂದ 16 ನಕ್ಸಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪೈಕಿ 11 ಮಂದಿಯನ್ನು ಮೇ 28ರಂದು ಮಾವೋವಾದಿಗಳು ಬಂದ್‌ಗೆ ಕರೆ ನೀಡಿದ್ದ ವೇಳೆ ಗೋರ್ನಾ–ಪಡಿಯಾಪಾರ ಹಳ್ಳಿಯಲ್ಲಿ ಜಿಲ್ಲಾ ಮೀಸಲು ಪಡೆ ಮತ್ತು ಸ್ಥಳೀಯ ಪೊಲೀಸರು ಬಂಧಿಸಿದ್ದರು.

ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಸುಧಾರಿತ ಸ್ಫೋಟಕಗಳನ್ನು ಇಡುವುದು ಮತ್ತು ಇನ್ನಿತರ ಹಿಂಸಾತ್ಮಕ ಕೃತ್ಯಗಳಲ್ಲಿ ಇವರು ಭಾಗಿಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇನ್ನುಳಿದ ಐವರು ನಕ್ಸಲರನ್ನು ಉಸೂರ್ ಪೊಲೀಸ್ ಠಾಣಾ ವ್ಯಾಪ್ತಿಯ ಬುಸಾಪುರ ಹಳ್ಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಕೋಬ್ರಾ ಬೆಟಾಲಿಯನ್ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.

ಈ ಐವರು ಏಪ್ರಿಲ್‌ನಲ್ಲಿ ಪೊಲೀಸರನ್ನು ಗುರಿಯಾಗಿಸಿಕೊಂಡು ಬಾಂಬ್ ಇರಿಸಿದ್ದ ಕೃತ್ಯದಲ್ಲಿ ಭಾಗಿಯಾಗಿದ್ದರು ಎಂದು ವರದಿ ತಿಳಿಸಿದೆ.

ಈ ಎಲ್ಲ 16 ಮಂದಿ ನಕ್ಸಲರು, ಕಾನೂನುಬಾಹಿರ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಸದಸ್ಯರಾಗಿದ್ದಾರೆ.

of the lower hierarchy of the outlawed Communist Party of India (Maoist), the official said.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT