ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಢದಲ್ಲಿ ಎನ್‌ಕೌಂಟರ್‌: ಆರು ನಕ್ಸಲರ ಹತ್ಯೆ

Published 27 ಮಾರ್ಚ್ 2024, 5:50 IST
Last Updated 27 ಮಾರ್ಚ್ 2024, 5:50 IST
ಅಕ್ಷರ ಗಾತ್ರ

ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು (ಬುಧವಾರ) ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜಾಪುರ ಜಿಲ್ಲೆಯ ಚಿಕುರ್ಬಟ್ಟಿ - ಪುಸ್ಬಾಕ ಸಮೀಪದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಕಲ್ಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಳಿಕ ಆರು ನಕ್ಸಲರ ಮೃತದೇಹಗಳು ಪತ್ತೆಯಾಗಿವೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಸಿಆರ್‌ಪಿಎಫ್‌ನ ಮುಖ್ಯ ಘಟಕ `ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್' (ಕೋಬ್ರಾ) ಸಿಬ್ಬಂದಿ ಈ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿಯಲ್ಲಿ ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಸೇರಿದಂತೆ ಮೂವರು ನಕ್ಸಲರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT