ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾನ್‌ಸ್ಟೆಬಲ್ ಅಜಯ್ ಸಿದರ್ ರೈಫಲ್‌ನಿಂದ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕಾನ್‌ಸ್ಟೆಬಲ್ ರೂಪೇಶ್ ಪಟೇಲ್ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಕಾನ್‌ಸ್ಟೆಬಲ್ ಸಂದೀಪ್ ಪಾಂಡೆ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮಹಾನಿರೀಕ್ಷಕ (ಸುರ್ಗುಜಾ ಶ್ರೇಣಿ) ಅಂಕಿತ್ ಗಾರ್ಗ್ ಮಾಹಿತಿ ನೀಡಿದ್ದಾರೆ.