ರಾಯಪುರ: ಛತ್ತೀಸಗಢದ ಬುಡಕಟ್ಟು ಜನರ ಪ್ರಾಬಲ್ಯವಿರುವ ಸುಕ್ಮಾ ಜಿಲ್ಲೆಯ ವಸತಿ ಶಾಲೆಯೊಂದರ ಹಾಸ್ಟೆಲ್‌ನಲ್ಲಿ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವುದಾಗಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಜುಲೈ 22ರಂದು ರಾತ್ರಿ ಪ್ರಕರಣ ನಡೆದಿದ್ದು, ಆರೋಪಿಯ ಪತ್ತೆಗಾಗಿ ಎಂಟು ಮಂದಿ ಸದಸ್ಯರ ತಂಡವೊಂದನ್ನು ಪೊಲೀಸರು ರಚಿಸಿದ್ದಾರೆ ಎಂದೂ ಹೇಳಿದ್ದಾರೆ.
ತನ್ನ ಮೇಲೆ ಅತ್ಯಾಚಾರ ನಡೆದಿರುವ ವಿಚಾರವನ್ನು ಬಾಲಕಿಯು ಪೋಷಕರಿಗೆ ತಿಳಿಸಿದ್ದಳು. ಅವರು ಈ ವಿಚಾರವನ್ನು ಹಾಸ್ಟೆಲ್‌ನ ಮೇಲ್ವಿಚಾರಕರ ಗಮನಕ್ಕೆ ತಂದಿದ್ದಾರೆ. ಬಳಿಕ ಪ್ರಕರಣ ದಾಖಲಾಗಿದೆ ಎಂದು ಸುಕ್ಮಾದ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಜಿ.ಚವಾಣ್ ವಿವರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.