ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Chhattisgarh Election: ನಾಮಪತ್ರ ಸಲ್ಲಿಸಿದ ಛತ್ತೀಸಗಢ ಸಿಎಂ ಭೂಪೇಶ್‌ ಬಘೆಲ್‌

Published 30 ಅಕ್ಟೋಬರ್ 2023, 9:14 IST
Last Updated 30 ಅಕ್ಟೋಬರ್ 2023, 9:14 IST
ಅಕ್ಷರ ಗಾತ್ರ

ರಾಯಪುರ: ಛತ್ತೀಸಗಢ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಅವರು ಇಂದು (ಸೋಮವಾರ) ಪಟಾನ್ ವಿಧಾನಸಭೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

90 ಸದಸ್ಯ ಬಲದ ಛತ್ತೀಸಗಢ ವಿಧಾನಸಭೆಗೆ ನವೆಂಬರ್ 7 ಹಾಗೂ 17ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 20 ಕ್ಷೇತ್ರಗಳಿಗೆ ಮತ್ತು 2ನೇ ಹಂತದಲ್ಲಿ 70 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.

ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ಅಧಿಕಾರದಲ್ಲಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿವೆ. ರಾಜ್ಯದಲ್ಲಿ ಕಾಂಗ್ರೆಸ್‌ ನಾಯಕರ ಪರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಪ್ರಮುಖರು ಭರ್ಜರಿ ಪ್ರಚಾರ ನಡೆಸಿದ್ದಾರೆ.

2018ರಲ್ಲಿ ಬಿಜೆಪಿಗೆ ಮುಖಭಂಗ

2003ರಿಂದ 2018ರ ವರೆಗೆ ಸತತ ಮೂರು ಬಾರಿ ಆಡಳಿತ ನಡೆಸಿದ್ದ ಬಿಜೆಪಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿತ್ತು. ಕೇವಲ 15 ಸ್ಥಾನಗಳನ್ನು ಜಯಿಸುವುದರೊಂದಿಗೆ ಅಧಿಕಾರದಿಂದ ಕೆಳಗಿಳಿದಿತ್ತು.

2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 68 ಕ್ಷೇತ್ರಗಳಲ್ಲಿ ಜಯ ಗಳಿಸಿ ಭಾರಿ ಬಹುಮತ ಸಾಧಿಸಿತ್ತು. ಜೆಸಿಸಿ ಮತ್ತು ಬಿಎಸ್‌ಪಿ ಪಕ್ಷಗಳು ಕ್ರಮವಾಗಿ 5 ಹಾಗೂ 2 ಸ್ಥಾನ ಜಯಿಸಿದ್ದವು.

ಪ್ರಸ್ತುತ ವಿಧಾನಸಭೆಯಲ್ಲಿ ಕಾಂಗ್ರೆಸ್ 71 ಸದಸ್ಯರ ಬಲ ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT