ರಾಯಪುರ (ಪಿಟಿಐ): ರಾಜಸ್ಥಾನದ ಟೈಲರ್ ಕನ್ಹಯ್ಯ ಲಾಲ್ ಹತ್ಯೆಯ ಆರೋಪಿಗಳ ಜೊತೆಗಿನ ಸಂಬಂಧದ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ಬಿಜೆಪಿಯನ್ನು ಭಾನುವಾರ ಕೇಳಿದ್ದು, ಈ ಘಟನೆಯು ಕೋಮುಗಲಭೆಯನ್ನು ಪ್ರಚೋದಿಸುವ ಪಿತೂರಿಯಾಗಿದೆಯೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

‘ಉದಯಪುರದಲ್ಲಿ ನಡೆದ ಬರ್ಬರ ಹತ್ಯೆಯನ್ನು ಯಾವುದೇ ನಾಗರಿಕ ಸಮಾಜ ಒಪ್ಪಿಕೊಳ್ಳುವುದಿಲ್ಲ. ಆರೋಪಿಗಳಿಗೆ ಶೀಘ್ರ ಶಿಕ್ಷೆಯಾಗಬೇಕೆಂದು ನಾನು ಒತ್ತಾಯಿಸಿದ್ದೇನೆ. ಆದರೆ ಆರೋಪಿಗಳ ಜತೆ ಬಿಜೆಪಿ ನಂಟು ಹೊಂದಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಬಿಜೆಪಿ ಸ್ಪಷ್ಟನೆ ನೀಡಬೇಕು. ಇದು ಕೋಮುಗಲಭೆ ಎಬ್ಬಿಸುವ ಷಡ್ಯಂತ್ರವೇ? ಘಟನೆಯ ಸಂಚುಕೋರರು ಯಾರು? ಇದರ ಬಗ್ಗೆ ತನಿಖೆಯಾಗಬೇಕು’ ಎಂದು ಭೂಪೇಶ್ ಅವರು ಹೇಳಿದರು.

ಕನ್ಹಯ್ಯ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಸದಸ್ಯ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದ್ದು, ಬಿಜೆಪಿ ಈ ಹೇಳಿಕೆಯನ್ನು ಆಧಾರ ರಹಿತ ಎಂದು ತಳ್ಳಿ ಹಾಕಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.