ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಗಣತಿ ನಡೆಸದಿರಲು ಕಾರಣವೇನು: ಕೇಂದ್ರ ಸರ್ಕಾರಕ್ಕೆ ಛತ್ತೀಸಗಢ ಸಿಎಂ ಪ್ರಶ್ನೆ

Published 7 ಅಕ್ಟೋಬರ್ 2023, 14:01 IST
Last Updated 7 ಅಕ್ಟೋಬರ್ 2023, 14:01 IST
ಅಕ್ಷರ ಗಾತ್ರ

ರಾಯಪುರ: ಬಿಜೆಪಿಯು ಮೀಸಲಾತಿ ವಿರೋಧಿಯಾಗಿದೆ ಎಂದು ಆರೋಪಿಸಿರುವ ಛತ್ತೀಸಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು, ‘2021ರಲ್ಲೇ ಕೈಗೊಳ್ಳಬೇಕಿದ್ದ ಜನಗಣತಿಯನ್ನು ಕೇಂದ್ರ ಸರ್ಕಾರ ಇನ್ನೂ ಯಾಕೆ ನಡೆಸುತ್ತಿಲ್ಲ’ ಎಂದು ಪ್ರಶ್ನಿಸಿದ್ದಾರೆ. 

ರಾಜ್ಯದಲ್ಲಿ ಕೈಗೊಂಡಿರುವ ಸಾಮಾಜಿಕ–ಆರ್ಥಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಯಾಕೆ ಪ್ರಕಟಿಸುತ್ತಿಲ್ಲ ಎಂದು ಪ್ರತಿಪಕ್ಷ ಪ್ರಶ್ನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರ್ಕಾರ ಯಾವ ಆಧಾರದ ಮೇಲೆ ಇತರೆ ಹಿಂದುಳಿದ ವರ್ಗಗಳಿಗೆ ಶೇ 27 ಮೀಸಲಾತಿ ಕಲ್ಪಿಸಿದೆ ಎಂದು ನ್ಯಾಯಾಲಯ ಪ್ರಶ್ನಿಸಿತ್ತು. ಹೀಗಾಗಿ ಇತರೆ ಹಿಂದುಳಿದ ವರ್ಗಗಳು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರ ಗಣತಿ ಮಾಡಲಾಗಿತ್ತು. ಆ ಪ್ರಕಾರ ರಾಜ್ಯದಲ್ಲಿ ಶೇ 43.5ರಷ್ಟು ಇತರೆ ಹಿಂದುಳಿದ ವರ್ಗಗಳು, 3.5ರಷ್ಟು ಆರ್ಥಿಕವಾಗಿ ಹಿಂದುಳಿದ ಜನರು ಇದ್ದು, ಇದರ ಆಧಾರದಲ್ಲೇ ಮೀಸಲಾತಿ ಕಲ್ಪಿಸಲಾಗಿದೆ ಎಂದರು. 

ರಾಜ್ಯದಲ್ಲಿ ಇತರೆ ಹಿಂದುಳಿದ ವರ್ಗಗಳ ಜನ ಶೇ 43ಕ್ಕಿಂತ ಹೆಚ್ಚು ಇದ್ದಾರೆ ಎಂಬುದರಲ್ಲಿ ಬಿಜೆಪಿಗೆ ನಂಬಿಕೆ ಇಲ್ಲವೇ? ಹಾಗಿದ್ದರೆ, 2021ರಲ್ಲಿ ಜನಗಣತಿ ಮಾಡಿಲ್ಲದಿರುವುದು ಏಕೆ? ಸಾಮಾಜಿಕ–ಆರ್ಥಿಕ ಸಮೀಕ್ಷೆ ಕೈಗೊಳ್ಳಲು ನಮಗೆ ಸಾಧ್ಯವಾಗಬಹುದಾದರೆ ಮತ್ತು ಬಿಹಾರ ಸರ್ಕಾರ ಜಾತಿಗಣತಿ ಕೈಗೊಳ್ಳಲು ಸಾಧ್ಯವಾಗುವುದಾದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಇದನ್ನು ಮಾಡಲು ಸಾಧ್ಯವಾಗಿಲ್ಲ ಏಕೆ ಎಂದು ಪ್ರಶ್ನಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT