ರಾಯ್‌ಪುರ್: ಛತ್ತೀಸ್‌ಗಢದಲ್ಲಿ ನಕ್ಸಲರು ನಡೆಸಿರುವ ಸುಧಾರಿತ ಸ್ಫೋಟಕ ಸಾಧನದ (ಐಇಡಿ) ಸ್ಫೋಟದಲ್ಲಿ ಐವರು ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಮಂಗಳವಾರ ನಾರಾಯಣಪುರ ಜಿಲ್ಲೆಯಲ್ಲಿ ಐಇಡಿ ಸ್ಫೋಟ ಸಂಭವಿಸಿದೆ. ಜಿಲ್ಲಾ ಮೀಸಲು ರಕ್ಷಣಾ ಪಡೆಯ (ಡಿಆರ್‌ಜಿ) ಸಿಬ್ಬಂದಿ ಸಾಗುತ್ತಿದ್ದ ಬಸ್ ಸ್ಫೋಟಕ್ಕೆ ಗುರಿಯಾಗಿದ್ದು, ಐವರು ಪೊಲೀಸರು ಸಾವಿಗೀಡಾಗಿರುವುದಾಗಿ ವರದಿಯಾಗಿದೆ. ಮೀಸಲು ರಕ್ಷಣಾ ಪಡೆಯ ಸುಮಾರು 13 ಸಿಬ್ಬಂದಿ ಗಾಯಗೊಂಡಿದ್ದಾರೆ.

'ಬಸ್‌ನ ಚಾಲಕ ಸೇರಿದಂತೆ ಡಿಆರ್‌ಜಿಯ ಐದು ಮಂದಿ ಸಿಬ್ಬಂದಿ ನಕ್ಸಲರ ಐಇಡಿ ಸ್ಫೋಟದಲ್ಲಿ ಮೃತಪಟ್ಟಿದ್ದಾರೆ' ಎಂದು ಬಸ್ತರ್‌ನ ಐಜಿ ಪಿ.ಸುಂದರ್‌ರಾಜ್ ಹೇಳಿದ್ದಾರೆ.

ಕದೆನಾರ್ ಮತ್ತು ಕಂಹಾರ್‌ಗಾಂವ್ ನಡುವಿನ ಪ್ರದೇಶದಲ್ಲಿ ಐಇಡಿ ಸ್ಫೋಟ ಆಗಿರುವುದಾಗಿ ವರದಿಯಾಗಿದೆ. ಬಸ್‌ನಲ್ಲಿ ರಕ್ಷಣಾ ಪಡೆಯ ಒಟ್ಟು 27 ಸಿಬ್ಬಂದಿ ಇದ್ದರು. ಐಟಿಬಿಪಿ ಸಿಬ್ಬಂದಿ ಗಾಯಗೊಂಡವರನ್ನು ಸ್ಥಳದಿಂದ ಸಾಗಿಸುವ ಕಾರ್ಯ ನಡೆಸುತ್ತಿದ್ದು, ಸುತ್ತಲಿನ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗಾಯಗೊಂಡವರನ್ನು ಭಾರತೀಯ ವಾಯು ಪಡೆಯ ಚಾಪರ್‌ಗಳ ಮೂಲಕ ಏರ್‌ಲಿಫ್ಟ್ ಮಾಡಲಾಗಿದೆ.

ಸ್ಫೋಟದ ಪರಿಣಾಮ ಬಸ್ ಸೇತುವೆಯಿಂದ ಕೆಳಕ್ಕೆ ಉರುಳಿದೆ.

'ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಸಲಾಗುತ್ತಿದೆ. ಜಿಲ್ಲಾ ಮೀಸಲು ರಕ್ಷಣಾ ಪಡೆಯ ಒಂದು ತಂಡ ಕಾರ್ಯಾಚರಣೆಯ ಬಳಿಕ ವಾಪಸಾಗುತ್ತಿದ್ದಾಗ, ಮೂರು ಐಇಡಿ ಸ್ಫೋಟಗಳು ನಡೆದಿವೆ. ಬಸ್ ಸೇತುವೆಯ ಸಮೀಪ ಸಾಗುವ ಸ್ಫೋಟ ನಡೆದಿದೆ. ಬಸ್‌ನ ಚಾಲಕ ಮತ್ತು ಇಬ್ಬರು ಸಿಬ್ಬಂದಿ ಸ್ಥಳದಲ್ಲಿಯೇ ಸಾವಿಗೀಡಾದರೆ, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಟ್ಟು ಐವರು ಸಿಬ್ಬಂದಿ ಹುತಾತ್ಮರಾಗಿದ್ದಾರೆ' ಎಂದು ನಕ್ಸಲ್ ನಿಗ್ರಹ ಪಡೆಯ ಡಿಜಿ ಅಶೋಕ್ ಜುನೇಜಾ ತಿಳಿಸಿದ್ದಾರೆ.

ನಕ್ಸಲರ ಸ್ಫೋಟದಲ್ಲಿ ಯೋಧರ ಸಾವಿಗೆ ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡಿರುವವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.