ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಢ–ಮಿಜೋರಾಂನಲ್ಲಿ ಇಂದು ಮತದಾನ: ಬಿಗಿ ಪೊಲೀಸ್‌ ಬಂದೋಬಸ್ತ್

Published 6 ನವೆಂಬರ್ 2023, 23:30 IST
Last Updated 6 ನವೆಂಬರ್ 2023, 23:30 IST
ಅಕ್ಷರ ಗಾತ್ರ

ರಾಯಪುರ/ಐಜ್ವಾಲ್: ಛತ್ತೀಸಗಢ ಮತ್ತು ಮಿಜೋರಾಂ ವಿಧಾನಸಭೆಗೆ ಮಂಗಳವಾರ ಮತದಾನ ನಡೆಯಲಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. 

ಛತ್ತೀಸಗಢ ವಿಧಾನಸಭೆಗೆ ಮೊದಲ ಹಂತದಲ್ಲಿ 20 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 25,249 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 25 ಮಹಿಳೆಯರು ಸೇರಿದಂತೆ 223 ಅಭ್ಯರ್ಥಿಗಳ ಭವಿಷ್ಯವನ್ನು 40,78,681 ಮತದಾರರು ನಿರ್ಧರಿಸಲಿದ್ದಾರೆ. 5,304 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಮಿಜೋರಾಂ ವಿಧಾನಸಭೆಯ 40 ಸ್ಥಾನಗಳಿಗೆ ಸ್ಪರ್ಧಿಸಿರುವ 174 ಅಭ್ಯರ್ಥಿಗಳ (18 ಮಹಿಳೆಯರು) ಭವಿಷ್ಯವನ್ನು ನಿರ್ಧರಿಸಲು 8.57 ಲಕ್ಷಕ್ಕೂ ಹೆಚ್ಚು ಮತದಾರರು ಸಜ್ಜಾಗಿದ್ದಾರೆ. 1,276 ಮತಗಟ್ಟೆ ಸ್ಥಾಪಿಸಲಾಗಿದೆ.  

ಆಡಳಿತಾರೂಢ ಮಿಜೊ ನ್ಯಾಷನಲ್‌ ಫ್ರಂಟ್ (ಎಂಎನ್‌ಎಫ್), ವಿರೋಧ ಪಕ್ಷ ಝೆಡ್‌ಪಿಎಂ 40 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಬಿಜೆಪಿ ಮತ್ತು ಎಎಪಿ ಕ್ರಮವಾಗಿ 23 ಮತ್ತು 4 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿವೆ. 27 ಪಕ್ಷೇತರರು ಕಣದಲ್ಲಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT