ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಗಾಳಿ: ಶಾಲೆ ಆರಂಭ ಮುಂದೂಡಿದ ಛತ್ತೀಸ್‌ಗಢ ಸರ್ಕಾರ

Published 14 ಜೂನ್ 2023, 9:31 IST
Last Updated 14 ಜೂನ್ 2023, 9:31 IST
ಅಕ್ಷರ ಗಾತ್ರ

ರಾಯ್‌ಪುರ: ಬಿಸಿಗಾಳಿ, ಬಿಸಿಲಿನ ಬೇಗೆ ಮುಂದುವರಿದ ಕಾರಣ ಬೇಸಿಗೆ ರಜೆಯನ್ನು ಇನ್ನೂ ಹತ್ತು ದಿನಗಳ ಕಾಲ ಮುಂದೂಡುವಂತೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜೂನ್‌ 16ರಂದು ಛತ್ತೀಸ್‌ಗಢದಲ್ಲಿ ಶಾಲೆ ಪ್ರಾರಂಭಿಸಲು ನಿರ್ಧರಿಸಿದ್ದು, ಇದೀಗ ಈ ದಿನಾಂಕವನ್ನು ಜೂನ್‌ 26ಕ್ಕೆ ಮುಂದೂಡಲಾಗಿದೆ.

ತಾಪಮಾನ ಹೆಚ್ಚಳ ಹಾಗೂ ಬಿಸಿಗಾಳಿಯು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದ್ದು, ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಶಾಲಾ ಪ್ರಾರಂಭದ ದಿನಾಂಕವನ್ನು ಮುಂದೂಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ರಾಜ್ಯದ ಎಲ್ಲ ಶಾಲೆಗಳಿಗೂ ನಿರ್ದೇಶನ ನೀಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಛತ್ತೀಸ್‌ಗಢದ ಕೆಲವು ಭಾಗದಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿಯ ವಾತಾವರಣ ಇರಲಿದೆ ಎಂದು ಮಂಗಳವಾರ ರಾಯ್‌ಪುರ ಹವಮಾನ ಇಲಾಖೆ ತಿಳಿಸಿತ್ತು. ಅಲ್ಲದೇ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಮುನ್ಸೂಚನೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT