ಈ ಸಂಬಂಧ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಛತ್ತೀಸಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ, ‘ಮಹಾದೇವ್ ಬೆಟ್ಟಿಂಗ್ ಆ್ಯಪ್‌ನಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಛತ್ತೀಸಗಢದ ವಿವಿಧ ಠಾಣೆಗಳಲ್ಲಿ 70 ಪ್ರಕರಣ ಹಾಗೂ ಆರ್ಥಿಕ ಅಪರಾಧಗಳ ವಿಭಾಗದಲ್ಲಿ ಒಂದು ಪ್ರಕರಣ ದಾಖಲಾಗಿದೆ. ಈ ಎಲ್ಲ ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಲು ಸರ್ಕಾರ ನಿರ್ಧರಿಸಿದ್ದು, ಕಳೆದ ವಾರ ಅಧಿಸೂಚನೆಯನ್ನು ಹೊರಡಿಸಿದೆ’ ಎಂದು ತಿಳಿಸಿದ್ದಾರೆ.