ಜೈಪುರ: ಅಡುಗೆ ಅನಿಲ ಸಂಗ್ರಹಣೆಯನ್ನು ತಡೆಗಟ್ಟುವ ಕ್ರಮದ ಭಾಗವಾಗಿ ಛತ್ತೀಸಗಢ ಅಧಿಕಾರಿಗಳು, ಕಳೆದ ಎರಡು ವಾರದಲ್ಲಿ ರಾಜ್ಯದ 335 ಕಡೆಗಳಲ್ಲಿ ಒಟ್ಟು 3,841 ಎಲ್ಪಿಜಿ ಸಿಲಿಂಡರ್ಗಳನ್ನು ವಶಪಡಿಸಿಕೊಂಡಿದ್ದಾರೆ.

ಪಶ್ಚಿಮ ಏಷ್ಯಾ ಸಂಘರ್ಷದಿಂದ ಎಲ್ಪಿಜಿ ಕೊರತೆ ಉಂಟಾಗಿರುವ ನಡುವೆ, ಎಲ್ಪಿಜಿಯ ಲಭ್ಯತೆ, ವಿತರಣಾ ವ್ಯವಸ್ಥೆಯನ್ನು ಸುಗಮಗೊಳಿಸುವ ಕುರಿತು ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಉನ್ನತ ಮಟ್ಟದ ಸಭೆ ನಡೆಯಿತು.

ಕಾಳಸಂತೆಯಲ್ಲಿ ಸಿಲಿಂಡರ್ಗಳನ್ನು ಮಾರಾಟ ಮಾಡುವುದು ದೃಢಪಟ್ಟಿಲ್ಲ. ಆದರೆ ಸಿಲಿಂಡರ್ಗಳನ್ನು ಸಂಗ್ರಹಿಸಿಟ್ಟುಕೊಂಡವರ ಮೇಲೆ ಕ್ರಮ ಕೈಗೊಳ್ಳಲಾಗಿದ್ದು, 97 ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಅಡುಗೆ ಅನಿಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ದಾಸ್ತಾನು, ಪೂರೈಕೆಯನ್ನು ಗಮನಿಸುವಂತೆ ಹಾಗೂ ಸಂಗ್ರಹಣೆ ಮತ್ತು ಲಾಭಕೋರತನದ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಗತ್ಯ ಸೇವೆಗಳನ್ನು ಸಕಾಲಿಕವಾಗಿ ತಲುಪಿಸುವುದು ಸರ್ಕಾರದ ಕರ್ತವ್ಯವಾಗಿದೆ. ನಾಗರಿಕರು ಭಯಭೀತರಾಗಬಾರದು ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.