ರಾಯ್‌ಪುರ: 18 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಹಿಂಸೆ ನೀಡಿದ್ದಕ್ಕಾಗಿ 40 ವರ್ಷದ ವ್ಯಕ್ತಿಯನ್ನು ಛತ್ತೀಸಗಡದಲ್ಲಿ ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಕಳೆದ ಎರಡು ವರ್ಷಗಳಿಂದ ಆರೋಪಿಯು ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದಾನೆ. ಆರೋಪಿಯು ಮತ್ತೆ ಸಂತ್ರಸ್ತೆಯನ್ನು ಅತ್ಯಾಚಾರ ಮಾಡಲು ಯತ್ನಿಸಿದಾಗ ಭಾನುವಾರ ಈ ಅಪರಾಧ ಬೆಳಕಿಗೆ ಬಂದಿದೆ. ಸಂತ್ರಸ್ತೆ ಮತ್ತು ಆಕೆಯ ತಾಯಿ ಆರೋಪಿ ವಿರುದ್ಧ ದೂರು ನೀಡಿದ್ದಾರೆ' ಎಂದು ಉರ್ಲಾ ಸ್ಟೇಷನ್ ಹೌಸ್ ಅಧಿಕಾರಿ (ಎಸ್‌ಎಚ್‌ಒ) ಅಮಿತ್ ತಿವಾರಿ ತಿಳಿಸಿದ್ದಾರೆ.

ಈ ಕುರಿತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 294 (ಅಶ್ಲೀಲ ಕೃತ್ಯಗಳು), 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡಿದ ಶಿಕ್ಷೆ) ಮತ್ತು 376 (ಅತ್ಯಾಚಾರಕ್ಕೆ ಶಿಕ್ಷೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.