ಬಿಜಾಪುರ(ಛತ್ತೀಸಗಢ): ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು (ಶನಿವಾರ) ಬೆಳಿಗ್ಗೆ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಕ್ಸಲ್ ನಿಗ್ರಹ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್ಕೌಂಟರ್ ಭುಗಿಲೆದ್ದಿದೆ ಎಂದು ಪೊಲೀಸ್ ಮಹಾನಿರ್ದೇಶಕ ಸುಂದರರಾಜ್ ಪಿ ತಿಳಿಸಿದ್ದಾರೆ.

ಛತ್ತೀಸಗಢ ರಾಜ್ಯ ಪೊಲೀಸ್ನ ಜಿಲ್ಲಾ ಮೀಸಲು ಪಡೆ (ಡಿಆರ್ಜಿ), ವಿಶೇಷ ಕಾರ್ಯಪಡೆ (ಎಸ್ಟಿಎಫ್) ಮತ್ತು ಕೋಬ್ರಾದ 202 ಹಾಗೂ 210ನೇ ಬೆಟಾಲಿಯನ್ಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು.

ಘಟನಾ ಸ್ಥಳದಿಂದ ನಕ್ಸಲರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.

ಈ ವರ್ಷ ರಾಜ್ಯದಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಈವರೆಗೆ 138 ನಕ್ಸಲರು ಹತ್ಯೆಗೀಡಾಗಿದ್ದಾರೆ. ಈ ಪೈಕಿ ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ವಿಭಾಗದಲ್ಲಿ 122 ನಕ್ಸಲರನ್ನು ಹತ್ಯೆಗೈಯಲಾಗಿದೆ.
.ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ 12 ರಿಂದ 6ಕ್ಕೆ ಇಳಿಕೆ: ಅಮಿತ್ ಶಾ .ನಕ್ಸಲ್ ಮುಕ್ತ ಕರ್ನಾಟಕ, ನಕ್ಸಲ್ ನಿಗ್ರಹ ಪಡೆ ವಿಸರ್ಜನೆ: ಸಿಎಂ ಘೋಷಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.