ಬಿಜಾಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಇಂದು (ಗುರುವಾರ) ಮೂವರು ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ. ಮೂವರು ನಕ್ಸಲರಿಗೆ ಒಟ್ಟಾರೆ ₹19 ಲಕ್ಷ ಇನಾಮು ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜೂನ್ 2ರಂದು ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ 16 ನಕ್ಸಲರು ಪೊಲೀಸರಿಗೆ ಶರಣಾಗಿದ್ದರು. ಈ ಪೈಕಿ 6 ನಕ್ಸಲರ ಸುಳಿವು ಕೊಟ್ಟವರಿಗೆ ಒಟ್ಟು ₹25 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಇದಾದ ಒಂದು ವಾರದ ಬಳಿಕ ಈ ಬೆಳವಣಿಗೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

16 ನಕ್ಸಲರ ಪೈಕಿ ಒಂಬತ್ತು ನಕ್ಸಲರು ಕೆರ್ಲಪೆಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ್ದು, ಅವರ ಶರಣಾಗತಿಯ ಮೂಲಕ ಗ್ರಾಮವು ನಕ್ಸಲ್ ಮುಕ್ತವಾಗಿದೆ. ಸರ್ಕಾರದ ₹1 ಕೋಟಿ ಅನುದಾನ ಪಡೆಯಲು ಅರ್ಹವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.