ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಢ: ಮೂವರು ನಕ್ಸಲರ ಹತ್ಯೆ

Last Updated 23 ನವೆಂಬರ್ 2020, 14:11 IST
ಅಕ್ಷರ ಗಾತ್ರ

ಛತ್ತೀಸಗಡ: ಇಲ್ಲಿನ ಕಂಕೆರ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಸೋಮವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಮಹಿಳಾ ಕೇಡರ್‌ ಸೇರಿದಂತೆ ಮೂರು ಜನ ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡಿನ ಕಾಳಗದಲ್ಲಿ ಶಸ್ತ್ರಾಸ್ತ್ರ ಸೀಮಾ ಬಲದ (ಎಸ್‌ಎಸ್‌ಬಿ) ಯೋಧರೊಬ್ಬರು ಗಾಯಗೊಂಡಿದ್ದಾರೆ. ಸೋಮವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಎಸ್‌ಎಸ್‌ಬಿಯ 33ನೇ ಬೆಟಾಲಿಯನ್‌ ಕೋಸ್ರಂಡ ಶಿಬಿರದಲ್ಲಿ ಗಸ್ತು ನಿರತರಾಗಿದ್ದಾಗ ಈ ದಾಳಿ ನಡೆದಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹತ್ಯೆಯಾದ ಮೂರು ಜನ ಜನರೂ ನಕ್ಸಲ್‌ ಸಮವಸ್ತ್ರದಲ್ಲಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.

ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ ಎಕ್ಸ್‌–95 ರೈಫಲ್‌, ಎಸ್‌ಎಲ್‌ಆರ್‌ ರೈಫಲ್‌, ಇತರ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT