ಕೋಲ್ಕತ್ತ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿರುವ ತಾರಕೇಶ್ವರ ಎಂಬಲ್ಲಿ ನಾಲ್ಕು ವರ್ಷದ ಮಗುವನ್ನು ರೈಲ್ವೆ ಶೆಡ್ನಿಂದ ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
.ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ಕಾರಿನ ಮೇಲೆ ದಾಳಿ: ಆರೋಪ.
ರೈಲ್ವೆ ಶೆಡ್ನಲ್ಲಿ ಅಜ್ಜಿಯ ಪಕ್ಕದಲ್ಲಿ ಮಲಗಿದ್ದ ಮಗುವನ್ನು ಅಪಹರಿಸಿ ಕೃತ್ಯ ಎಸಗಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಶನಿವಾರ ಮಧ್ಯಾಹ್ನ, ಸಮೀಪದ ನಾಲೆಯ ಬಳಿ ಪ್ರಜ್ಞೆ ರಹಿತವಾಗಿ ಬಿದ್ದಿದ್ದ ಮಗುವಿನ ದೇಹದಲ್ಲಿ ಗಾಯದ ಗುರತುಗಳಿದ್ದವು ಎಂದು ಅವರು ಹೇಳಿದ್ದಾರೆ.

ಬಂಜಾರ ಸಮುದಾಯಕ್ಕೆ ಸೇರಿದ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಳಿಕ ಚಂದನನಗರ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.ಎಲ್ಲರಿಗೂ SIR ನಮೂನೆ ಸಿಗುವವರೆಗೆ ನಾನು ಅರ್ಜಿ ಭರ್ತಿ ಮಾಡಲ್ಲ: ಮಮತಾ ಬ್ಯಾನರ್ಜಿ.
ಏತನ್ಮಧ್ಯೆ,ತಾರಕೇಶ್ವರ ಠಾಣೆಯ ಪೊಲೀಸರು ಆರಂಭದಲ್ಲಿ ಘಟನೆಯ ಬಗ್ಗೆ ಎಫ್ಐಆರ್ ದಾಖಲಿಸಲು ನಿರಾಕರಿಸಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.

‘ಸತ್ಯವನ್ನು ನಿಗ್ರಹಿಸುವ ಮೂಲಕ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ನಕಲಿ ಚಿತ್ರಣವನ್ನು ರಕ್ಷಿಸಲು ಅಪರಾಧವನ್ನು ಕಡಗಣಿಸಲಾಗುತ್ತಿದೆ’ ಎಂದು ಅವರು ಎಕ್ಸ್ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.

‘ಮಮತಾ ಬ್ಯಾನರ್ಜಿಯವರೇ ನೀವು ವಿಫಲ ಮುಖ್ಯಮಂತ್ರಿ. ನಿಮ್ಮ ಆಡಳಿತದಲ್ಲಿ ಪಶ್ಚಿಮ ಬಂಗಾಳದ ಕಾನೂನು ಮತ್ತು ಸುವ್ಯವಸ್ಥೆ ನೆಲಕಚ್ಚಿದೆ’ ಎಂದು ಅವರು ಹೇಳಿದ್ದಾರೆ.
.ಎಸ್ಐಆರ್ ವಿರುದ್ಧ ಬೀದಿಗಿಳಿದ ಮಮತಾ ಬ್ಯಾನರ್ಜಿ: 3.8 ಕಿ.ಮೀ ಕಾಲ್ನಡಿಗೆ ಜಾಥ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.