ನವದೆಹಲಿಳ ದೆಹಲಿಯ ನರೇಲಾದ ಈಜುಕೊಳದಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.
.ಅತ್ಯಾಚಾರ | ಬಾಲಕಿಯರಷ್ಟೇ ಬಾಲಕರೂ ಸಮಾನ ಸಂತ್ರಸ್ತರು: ದೆಹಲಿ ನ್ಯಾಯಾಲಯ.
ನವದೆಹಲಿ: ಉತ್ತರ ದೆಹಲಿಯ ನರೇಲಾ ಪ್ರದೇಶದ ಹೊರವಲಯದ ಈಜುಕೊಳವೊಂದರಲ್ಲಿ ಒಂಬತ್ತು ವರ್ಷದ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಲ್ಯಾಂಪೂರ್ ಬಸ್ ನಿಲ್ದಾಣದ ಬಳಿ ಇರುವ ಈಜುಕೊಳದಲ್ಲಿ ಆಗಸ್ಟ್ 7 ರಂದು ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಸಂತ್ರಸ್ತ ಬಾಲಕಿಯರ ಪೈಕಿ ಒಬ್ಬಳ ತಾಯಿ ಆಗಸ್ಟ್ 8ರಂದು ನರೇಲಾ ಪೊಲೀಸ್ ಠಾಣೆಗೆ ತೆರಳಿ ತನ್ನ ಮಗಳು ಮತ್ತು ಇನ್ನೊಬ್ಬ ಬಾಲಕಿಯ ಮೇಲೆ ಈಜುಕೊಳದಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರು ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
.ಹಾಸನ: ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ .
ಅವರ ಹೇಳಿಕೆಯನ್ವಯ ಆಗಸ್ಟ್ 9 ರಂದು ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 70(2) 127(2) , 351 ಹಾಗೂ ಪೋಕ್ಸೊ ಕಾಯ್ದೆಯಡಿ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 183ರಡಿ ಮ್ಯಾಜಿಸ್ಟ್ರೇಟ್ ಮುಂದೆ ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದಾರೆ.
.ಅತ್ಯಾಚಾರ ಪ್ರಕರಣ: ಆರೋಪಿ ಪಾಕ್ ಕ್ರಿಕೆಟಿಗ ಹೈದರ್ ಅಲಿ ಅಮಾನತು .
ಪ್ರಕರಣ ಸಂಬಂಧ ಬಿಹಾರದ ಸಮಸ್ಟಿಪುರ ಜಿಲ್ಲೆಯ ನಿವಾಸಿ ಅನಿಲ್ ಕುಮಾರ್ (37) ಮತ್ತು ಉತ್ತರ ಪ್ರದೇಶದ ಅಜಮ್ಗಢ ಜಿಲ್ಲೆಯ ಮುನಿಲ್ ಕುಮಾರ್ (24) ಎಂಬವರನ್ನು ಬಂಧಿಸಲಾಗಿದೆ. ತನಿಖೆಯ ಸಮಯದಲ್ಲಿ, ಪೊಲೀಸರು ದಿಂಬಿನ ಕವರ್, ಬೆಡ್ಶೀಟ್ ಮತ್ತು ಡಿಜಿಟಲ್ ವಿಡಿಯೋ ರೆಕಾರ್ಡರ್ (DVR) ಸೇರಿದಂತೆ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇಬ್ಬರೂ ವ್ಯಕ್ತಿಗಳಿಗೆ ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
.ಚಿಕ್ಕಮಗಳೂರು | ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಸಜೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.