ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7 ಶಿಶುಗಳ ಸಾವು | ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಕೇಜ್ರಿವಾಲ್‌

Published 26 ಮೇ 2024, 6:44 IST
Last Updated 26 ಮೇ 2024, 6:44 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ವಿವೇಕ್ ವಿಹಾರ ಆಸ್ಪತ್ರೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ನವಜಾತ ಶಿಶುಗಳು ಮೃತಪಟ್ಟ ಘಟನೆ ಹೃದಯ ವಿದ್ರಾವಕ ಎಂದು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ದುಃಖ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ದೆಹಲಿ ಅರೋಗ್ಯ ಸಚಿವ ಸೌರಭ್ ಭಾರದ್ವಾಜ್ ಕೂಡ ಸಂತಾಪ ವ್ಯಕ್ತಪಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಘಟನೆಯಲ್ಲಿ ತಮ್ಮ ಮಕ್ಕಳನ್ನು ಕಳೆದುಕೊಂಡವರೊಂದಿಗೆ ಸರ್ಕಾರ ನಿಲ್ಲುತ್ತದೆ ಮತ್ತು ಗಾಯಗೊಂಡ ಶಿಶುಗಳಿಗೆ ಸರ್ಕಾರದವತಿಯಿಂದ ಸರಿಯಾದ ಚಿಕಿತ್ಸೆ ನೀಡಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಘಟನೆಯಲ್ಲಿ 7 ನವಜಾತ ಶಿಶುಗಳು ಸಾವನ್ನಪ್ಪಿವೆ. 12 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT