ಹೈದರಾಬಾದ್: ‘ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಗೆ ಮಧ್ಯಸ್ಥಿಕೆ ವಹಿಸಿದ್ದೇವೆ ಎಂಬ ಚೀನಾದ ಹೇಳಿಕೆಯಿಂದ ದೇಶಕ್ಕೆ ಅವಮಾನ ಆಗಿದೆ. ಕೇಂದ್ರ ಸರ್ಕಾರವು ಇದನ್ನು ತೀವ್ರವಾಗಿ ಖಂಡಿಸಬೇಕು ಮತ್ತು ಈ ಹೇಳಿಕೆಯನ್ನು ಸ್ಪಷ್ಟವಾಗಿ ತಿರಸ್ಕರಿಸಬೇಕು’ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಒತ್ತಾಯಿಸಿದ್ದಾರೆ.

‘ಚೀನಾದೊಂದಿಗಿನ ಸಂಬಂಧಗಳನ್ನು ‘ಸಹಜ ಸ್ಥಿತಿ’ಯಲ್ಲಿ ಇರಿಸಿಕೊಳ್ಳುವಾಗ, ಭಾರತದ ಗೌರವ ಅಥವಾ ಸಾರ್ವಭೌಮತೆಗೆ ಧಕ್ಕೆ ಆಗದಂತೆ ನೋಡಿಕೊಳ್ಳಬೇಕು’ ಎಂದೂ ಅವರು ಹೇಳಿದ್ದಾರೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ–ಪಾಕ್ ಯುದ್ಧ ನಿಲ್ಲಿಸಿದ್ದು ತಾವೇ ಎಂದು ಹೇಳಿದ್ದರು, ಇದರ ಬೆನ್ನಲ್ಲೇ ಹೆಚ್ಚುವರಿ ಸುಂಕ ವಿಧಿಸಿದ್ದರು. ಈಗ ಚೀನಾ, ಭಾರತ ಮತ್ತು ಪಾಕಿಸ್ತಾನವನ್ನು ಒಂದೇ ತಕ್ಕಡಿಯಲ್ಲಿ ಇಟ್ಟು, ದಕ್ಷಿಣ ಏಷ್ಯಾದಲ್ಲಿ ತನ್ನನ್ನು ತಾನು ಶ್ರೇಷ್ಠ ಎಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರ ಇದಕ್ಕೆ ಅವಕಾಶ ಕಲ್ಪಿಸಬಾರದು, ಮೋದಿ ಅವರು ಚೀನಾಕ್ಕೆ ಹೋಗಿದ್ದಾಗ ಈ ಒಪ್ಪಂದಕ್ಕೆ ಒಪ್ಪಿಕೊಂಡಿದ್ದರಾ ಎಂದು ಓವೈಸಿ ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.