ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ ಅತಿಕ್ರಮಣ ಮಾಡಿದ್ದು ಸುಳ್ಳೇ: ಪ್ರಧಾನಿ ಮೋದಿಗೆ ರಾಹುಲ್‌ ಗಾಂಧಿ ಪ್ರಶ್ನೆ

Published 21 ಆಗಸ್ಟ್ 2023, 5:01 IST
Last Updated 21 ಆಗಸ್ಟ್ 2023, 5:01 IST
ಅಕ್ಷರ ಗಾತ್ರ

ಲೇಹ್‌ : ‘ಲಡಾಖ್‌ನ ಒಂದಿಂಚೂ ಭೂಮಿಯನ್ನು ಚೀನಾ ವಶಪಡಿಸಿಕೊಂಡಿಲ್ಲ ಎಂದು ಮೋದಿ ಅವರು ಹೇಳಿರುವುದು ಸತ್ಯಕ್ಕೆ ದೂರವಾದ ಮಾತು’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾನುವಾರ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.

ತಮ್ಮ ತಂದೆ, ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಜನ್ಮದಿನದ ಅಂಗವಾಗಿ ಗೌರವನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚೀನಾ ಸೇನೆ ಲಡಾಖ್‌ನ ಹುಲ್ಲುಗಾವಲನ್ನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಲ್ಲಿನ ಜನರು ತಲ್ಲಣ ಗೊಂಡಿದ್ದಾರೆ’ ಎಂದು ತಿಳಿಸಿದರು.

‘ಚೀನಾ ಸೇನೆ ಒಳನುಸುಳಿ ತಮ್ಮ ಹುಲ್ಲುಗಾವಲು ವಶಪಡಿಸಿಕೊಂಡಿದೆ. ಅಲ್ಲಿಗೆ ಪ್ರವೇಶಿಸಲು ತಮಗ್ಯಾರಿಗೂ ಅವಕಾಶವಿಲ್ಲ ಎಂದು ಇಲ್ಲಿನ ಜನರು ಸ್ಪಷ್ಟವಾಗಿ ಹೇಳಿದ್ದಾರೆ’ ಎಂದರು.

‘ಭಾರತ್‌ ಜೋಡೊ ಯಾತ್ರೆಯ ವೇಳೆಯೇ ನಾನು ಲಾಡಾಖ್‌ಗೆ ಬರಬೇಕಾಗಿತ್ತು. ಆದರೆ ಕಾರಣಾಂತರ ಗಳಿಂದ ಇಲ್ಲಿಗೆ ಭೇಟಿ ನೀಡುವ ಯೋಜನೆ ಕೈಬಿಡಬೇಕಾಯಿತು. ಆದ್ದರಿಂದ ಸಂಪೂರ್ಣ ಪ್ರಮಾಣದ ಪ್ರವಾಸ ಕೈಗೊಳ್ಳಲೆಂದು ಈಗ ಇಲ್ಲಿಗೆ ಬಂದಿದ್ದೇನೆ’ ಎಂದು ಅವರು ವಿವರಿಸಿದರು.

‘ನಾನು ಈಗಾಗಲೇ ಪ್ಯಾಂಗಾಂಗ್‌ಗೆ ಬಂದಿದ್ದೇನೆ. ನಂತರ, ನುಬ್ರಾ ಮತ್ತು ಕಾರ್ಗಿಲ್‌ಗೆ ಭೇಟಿ ನೀಡಲಿದ್ದೇನೆ. ಈ ಪ್ರವಾಸದ ಉದ್ದೇಶವೇನೆಂದರೆ ಇಲ್ಲಿನ ಜನರ ಏನು ಹೇಳುತ್ತಾರೆ ಮತ್ತು ಅವರ ಕಷ್ಟಗಳೇನು ಎಂಬುದನ್ನು ಆಲಿಸುವುದು. ಹುಲ್ಲುಗಾವಲು ವಶದ ಕುರಿತು ಜನರು ವಿಪರೀತ ಕಳವಳಗೊಂಡಿದ್ದಾರೆ. ಇಲ್ಲಿನ ಮತ್ತೊಂದು ಸಮಸ್ಯೆಯೇನೆಂದರೆ ಸಮರ್ಪಕ ದೂರವಾಣಿ ಸಂಪರ್ಕ ಇಲ್ಲದಿರುವುದು’ ಎಂದು ಅವರು ತಿಳಿಸಿದರು.

ಈ ಪ್ರದೇಶದಲ್ಲಿ (ಲಡಾಖ್‌) ಯಾರನ್ನೇ ಕೇಳಿ, ಚೀನಾ ಸೇನೆ ಹುಲ್ಲುಗಾವಲನ್ನು ಸ್ವಾಧೀನಪಡಿಸಿಕೊಂಡಿದೆ ಎಂದೇ ಹೇಳುತ್ತಾರೆ
ರಾಹುಲ್‌ ಗಾಂಧಿ, ಕಾಂಗ್ರೆಸ್‌ ನಾಯಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT