ಬೀಜಿಂಗ್: ‘ಚೀನಾದಲ್ಲಿ 100 ಕೋಟಿಗೂ ಹೆಚ್ಚು ಲಸಿಕೆಯ ಡೋಸ್‌ಗಳನ್ನು ನೀಡಲಾಗಿದೆ. ಇದು ವಿಶ್ವದಲ್ಲಿ ವಿತರಿಸಲಾದ ಡೋಸ್‌ಗಳ ಮೂರನೇ ಒಂದು ಭಾಗಕ್ಕಿಂತ ಹೆಚ್ಚು’ ಎಂದು ಆರೋಗ್ಯ ಅಧಿಕಾರಿಗಳು ಭಾನುವಾರ ತಿಳಿಸಿದರು.

ಜಾಗತಿಕವಾಗಿ ವಿತರಣೆ ಮಾಡಲಾಗಿರುವ ಲಸಿಕೆಯ ಡೋಸ್‌ಗಳ ಸಂಖ್ಯೆಯು ಶುಕ್ರವಾರ 250 ಕೋಟಿಯನ್ನು ದಾಟಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.

ಚೀನಾದಲ್ಲಿ ಲಸಿಕೆ ಪಡೆದವರ ಶೇಕಡಾವಾರು ಪ್ರಮಾಣದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಿಲ್ಲ.

‘ಈ ತಿಂಗಳ ಅಂತ್ಯದ ವೇಳೆಗೆ ದೇಶದ ಜನಸಂಖ್ಯೆ ಶೇ 40ರಷ್ಟು ಮಂದಿಗೆ ಲಸಿಕೆ ನೀಡುವ ಗುರಿಯನ್ನು ಚೀನಾ ಸರ್ಕಾರ ಹಾಕಿಕೊಂಡಿದೆ. ಚೀನಾದ ಕೆಲವು ಪ್ರಾಂತ್ಯಗಳಲ್ಲಿ ಲಸಿಕೆಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಚೀನಾದಲ್ಲಿ ಭಾನುವಾರ 23 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.

ಚೀನಾವು ನಾಲ್ಕು ಕೋವಿಡ್ ಲಸಿಕೆಗಳಿಗೆ ಷರತ್ತುಬದ್ಧ ಅನುಮೋದನೆ ನೀಡಿದೆ. ಇವುಗಳು ಫೈಜರ್–ಬಯೊಎನ್‌ಟೆಕ್ ಮತ್ತು ಮಾಡರ್ನಾಗಿಂತ ಕಡಿಮೆ ಪರಿಣಾಮಕಾರಿ ಎಂದು ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.