ನವದೆಹಲಿ: ಕೇಂದ್ರ ಸಚಿವ, ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಗುರುವಾರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದರು.

ಚುನಾವಣೆಗೆ ಸಜ್ಜಾಗಿರುವ ಬಿಹಾರದ ರಾಜಕೀಯ ಪರಿಸ್ಥಿತಿಯ ಬಗ್ಗೆ ಇಬ್ಬರು ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದ್ದರೂ, ಸಭೆಯ ವಿವರಗಳ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಬಳಿಕ, ಬಿಹಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಎಕ್ಸ್ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಸ್ವಾನ್, ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀವ್ರ ಹದಗೆಟ್ಟಿದ್ದು, ಪ್ರತಿದಿನ ಕೊಲೆಗಳು ನಡೆಯುತ್ತಿವೆ. ಅಪರಾಧಿಗಳು ಕಾನೂನಿಗೆ ಸವಾಲುವೊಡ್ಡಿದ್ದಾರೆ‘ ಎಂದು ಹೇಳಿದ್ದಾರೆ.

‘ಅಪರಾಧಿಗಳ ನೈತಿಕ ಸ್ಥೈರ್ಯ ಹೆಚ್ಚಿದೆ. ವಿಧಾನಸಭೆ ಚುನಾವಣೆಗೆ ಮುನ್ನ ಅಪರಾಧ ಕೃತ್ಯಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುವ ಆಶಾಭಾವ ಇದೆ‘ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.