ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಹ್ರಾಡೂನ್‌ನಲ್ಲಿ ಕ್ಲೋರಿನ್ ಅನಿಲ ಸೋರಿಕೆ; ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ತಂಡ

Published 9 ಜನವರಿ 2024, 5:09 IST
Last Updated 9 ಜನವರಿ 2024, 5:09 IST
ಅಕ್ಷರ ಗಾತ್ರ

ಡೆಹ್ರಾಡೂನ್‌: ಇಲ್ಲಿನ ಪ್ರೇಮ್‌ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಝಂಜ್ರಾ ಪ್ರದೇಶದ ಖಾಲಿ ಜಾಗದಲ್ಲಿ ಇರಿಸಿದ್ದ ಸಿಲಿಂಡರ್‌ಗಳಿಂದ ಮಂಗಳವಾರ ಬೆಳಿಗ್ಗೆ ಕ್ಲೋರಿನ್ ಅನಿಲ ಸೋರಿಕೆಯಾಗಿದೆ. ಇದರಿಂದಾಗಿ ಸ್ಥಳೀಯರಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣೆ (ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌) ಮತ್ತು ಅಗ್ನಿಶಾಮಕ ಸಿಬ್ಬಂದಿಯೂ ದೌಡಾಯಿಸಿದ್ದಾರೆ.

ಇಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಸಿಲಿಂಡರ್‌ಗಳ ಸುರಕ್ಷಿತ ವಿಲೇವಾರಿಗೆ ಕಾರ್ಯಾಚರಣೆ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT