ಚಂಡೀಗಢ: ‘ಪದೇ ಪದೇ ಎದುರಾಗುವ ಚುನಾವಣೆಗಳು ರಾಷ್ಟ್ರದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತಿವೆ’ ಎಂದು ಪ್ರತಿಪಾದಿಸಿರುವ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ‘ಒಂದು ರಾಷ್ಟ್ರ, ಒಂದು ಚುನಾವಣೆ’ ನೀತಿಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಅಂತರರಾಷ್ಟ್ರೀಯ ಗೀತಾ ಉತ್ಸವದ ಅಂಗವಾಗಿ ಕುರುಕ್ಷೇತ್ರದಲ್ಲಿ ಬುಧವಾರ ನಡೆದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಚೌಹಾಣ್, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವು ಕ್ಷಿಪ್ರಗತಿಯಲ್ಲಿ ಮುನ್ನಡೆಯುತ್ತಿದೆ ಎಂದರು.

ಮೋದಿ ಅವರ ನೇತೃತ್ವದಲ್ಲಿ ವೈಭವಯುತ, ಸಮೃದ್ಧ ಮತ್ತು ಶಕ್ತಿಯುತ ಭಾರತವನ್ನು ನಿರ್ಮಿಸಲಾಗುತ್ತಿದೆ. ಶೀಘ್ರದಲ್ಲೇ, ಭಾರತವು ನಮ್ಮ ಕಣ್ಣಮುಂದೆಯೇ ‘ವಿಶ್ವ ಗುರು’(ವಿಶ್ವ ನಾಯಕ) ಆಗಲಿದೆ. ಇದರಲ್ಲಿ ಯಾವುದೇ ಸಂದೇಹವಿಲ್ಲ. ಇದು ಇಡೀ ಜಗತ್ತಿಗೆ ತಿಳಿದಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.