ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಸ್‌ಮಸ್‌ ಆಚರಣೆ: ತಾತ್ಕಾಲಿಕ ಸೇತುವೆ ಕುಸಿದು ಹಲವರಿಗೆ ಗಾಯ

Published 26 ಡಿಸೆಂಬರ್ 2023, 5:32 IST
Last Updated 26 ಡಿಸೆಂಬರ್ 2023, 5:32 IST
ಅಕ್ಷರ ಗಾತ್ರ

ತಿರುವನಂತಪುರಂ: ಕ್ರಿಸ್‌ಮಸ್‌ ಆಚರಣೆಯ ಭಾಗವಾಗಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆ ಕುಸಿದಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಕೇರಳದ ತಿರುವನಂತಪುರ ಜಿಲ್ಲೆಯ ಪೂವರ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ ಈ ಘಟನೆ ನಡೆದಿದೆ.

ಈ ಘಟನೆಯಲ್ಲಿ ಸುಮಾರು 8 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರಿಸ್‌ಮಸ್ ಆಚರಣೆಯ ಭಾಗವಾಗಿ ಯೇಸುವಿನ ವಿವಿಧ ಕಲಾಕೃತಿಗಳು, ವಿಭಿನ್ನ ಬಗೆಯ ಮೂರ್ತಿಗಳು, ಅಲಂಕಾರಿಕ ಪ್ರದರ್ಶನ ಏರ್ಪಡಿಸಿದ್ದರು. ಒಂದು ಭಾಗದಿಂದ ಇನ್ನೊಂದು ಕಡೆಗೆ ತೆರಳಲು ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಲಾಗಿತ್ತು. ಈ ವೇಳೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇತುವೆ ಮೇಲೆ ನಿಂತಿದ್ದಾರೆ. ಅಧಿಕ ಭಾರದಿಂದಾಗಿ ತಾತ್ಕಾಲಿಕ ಸೇತುವೆ ಕುಸಿದಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ತಾತ್ಕಾಲಿಕ ಸೇತುವೆಯು ನೆಲದ ಮಟ್ಟದಿಂದ 5 ಅಡಿಗಳಷ್ಟು ಎತ್ತರದಲ್ಲಿ ನಿರ್ಮಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT