ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Electoral Bonds: ಅಂದಿನಿಂದ ಇಂದಿನವರೆಗೆ...ಪ್ರಕರಣದ ಪ್ರಮುಖಾಂಶಗಳು

Published 11 ಮಾರ್ಚ್ 2024, 15:52 IST
Last Updated 11 ಮಾರ್ಚ್ 2024, 15:52 IST
ಅಕ್ಷರ ಗಾತ್ರ

ನವದೆಹಲಿ: ಚುನಾವಣಾ ಬಾಂಡ್ ವಿವರಗಳನ್ನು ಮಂಗಳವಾರವೇ ಸಲ್ಲಿಸಬೇಕು ಎಂದು ಎಸ್‌ಬಿಐಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಚುನಾವಣಾ ಬಾಂಡ್‌ ಪರಿಚಯಿಸಿದ ದಿನದಿಂದ ಈವರೆಗಿನ ಪ್ರಮುಖ ಘಟನಾವಳಿಗಳು ಇಲ್ಲಿವೆ.

  • 2017: ಚುನಾವಣಾ ಬಾಂಡ್‌ ಯೋಜನೆಯನ್ನು ಹಣಕಾಸು ಮಸೂದೆಯಲ್ಲಿ ಪರಿಚಯಿಸಲಾಯಿತು

  • 2017 ಸೆಪ್ಟೆಂಬರ್‌ 14: ಈ ಯೋಜನೆಯನ್ನು ಪ್ರಶ್ನಿಸಿ ಅಸೋಸಿಯೇಷನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್‌ (ಎಡಿಆರ್‌) ಎಂಬ ಸ್ವಯಂ ಸೇವಾ ಸಂಸ್ಥೆಯಿಂದ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ

  • 2017 ಅಕ್ಟೋಬರ್‌ 3: ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್‌ ಜಾರಿಗೊಳಿಸಿದ ಸುಪ್ರೀಂ ಕೋರ್ಟ್

  • 2018 ಜನವರಿ 2: ಚುನಾವಣಾ ಬಾಂಡ್‌ ಯೋಜನೆ ಕುರಿತು ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

  • 2022 ನವೆಂಬರ್‌ 7: ಯಾವುದಾದರೂ ವಿಧಾನಸಭೆಯ ಚುನಾವಣೆ ನಿಗದಿಯಾಗುವ ಸಾಧ್ಯತೆ ಇರುವ ವರ್ಷದಲ್ಲಿ ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡುವ ಅವಧಿಯನ್ನು 70 ದಿನಗಳಿಂದ 85 ದಿನಗಳಿಗೆ ಏರಿಕೆ ಮಾಡಿ ಯೋಜನೆಗೆ ತಿದ್ದುಪಡಿ ತರಲಾಯಿತು

  • 2023 ಅಕ್ಟೋಬರ್‌ 16: ಚುನಾವಣಾ ಬಾಂಡ್‌ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಐವರು ನ್ಯಾಯಮೂರ್ತಿಗಳಿರುವ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ

  • 2023 ಅಕ್ಟೋಬರ್‌ 31: ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ಸಾಂವಿಧಾನಿಕ ಪೀಠದಿಂದ ವಿಚಾರಣೆ ಆರಂಭ

  • 2023 ನವೆಂಬರ್‌ 2: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

  • 2024 ಫೆಬ್ರುವರಿ 15: ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿ, ಸರ್ವಾನುಮತದ ತೀರ್ಪು ಪ್ರಕಟ

  • 2024 ಮಾರ್ಚ್‌ 4: ರಾಜಕೀಯ ಪಕ್ಷಗಳು ಸ್ವೀಕರಿಸಿರುವ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಸಲ್ಲಿಸುವ ಅವಧಿಯನ್ನು ಜೂನ್‌ 30ರ ವರೆಗೆ ವಿಸ್ತರಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಮೊರೆಹೋದ ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ

  • 2024 ಮಾರ್ಚ್‌ 7: ಮಾರ್ಚ್‌ 6ರೊಳಗೆ ಚುನಾವಣಾ ಬಾಂಡ್‌ಗಳ ಮಾಹಿತಿ ಸಲ್ಲಿಸದೆ ನ್ಯಾಯಾಂಗ ನಿಂದನೆ ಮಾಡಿರುವುದಕ್ಕೆ ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

  • 2024 ಮಾರ್ಚ್‌ 11: ಅವಧಿ ವಿಸ್ತರಣೆ ಕೋರಿ ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸಾಂವಿಧಾನಿಕ ಪೀಠ

  • ಜೂನ್‌ 30ರ ವರೆಗೆ ಸಮಯಾವಕಾಶ ಕೋರಿ ಎಸ್‌ಬಿಐ ಸಲ್ಲಿಸಿದ್ದ ಅರ್ಜಿ ವಜಾ

  • ಆದೇಶ ಪಾಲಿಸದಿದ್ದರೆ ಕಾನೂನು ಕ್ರಮದ ಪ್ರಕ್ರಿಯೆ ಆರಂಭ: ಪೀಠ ಎಚ್ಚರಿಕೆ

  • ಮಾರ್ಚ್‌ 15ರ ಸಂಜೆ 5ರ ಒಳಗಾಗಿ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಮಾಹಿತಿ ಲಭ್ಯವಿರಬೇಕು: ‘ಸುಪ್ರೀಂ’ ಆದೇಶ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT