ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬದ್ಲಾಪುರ ಲೈಂಗಿಕ ದೌರ್ಜನ್ಯ ಆರೋಪಿಯ ಎನ್‌ಕೌಂಟರ್‌: ಸಿಐಡಿ ತನಿಖೆ

Published : 24 ಸೆಪ್ಟೆಂಬರ್ 2024, 6:54 IST
Last Updated : 24 ಸೆಪ್ಟೆಂಬರ್ 2024, 6:54 IST
ಫಾಲೋ ಮಾಡಿ
Comments

ಮುಂಬೈ: ಬದ್ಲಾಪುರದಲ್ಲಿ ನಡೆದ ಇಬ್ಬರು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಅಕ್ಷಯ್‌ ಶಿಂದೆ ಸೋಮವಾರ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಈ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರದ ಅಪರಾಧ ಪತ್ತೆ ದಳ (ಸಿಐಡಿ) ನಡೆಸಲಿದೆ ಎಂದು ಅಧಿಕಾರಿಗಳು ಇಂದು (ಮಂಗಳವಾರ) ತಿಳಿಸಿದ್ದಾರೆ.

ಪೊಲೀಸ್ ವಾಹನದ ಒಳಗೆ ಅಕ್ಷಯ್‌ ಶಿಂದೆ ಹತ್ಯೆಗೀಡಾಗಿದ್ದಾನೆ. ಈ ಸಂಬಂಧ ವಿಧಿವಿಜ್ಞಾನ ತಜ್ಞರ ತಂಡವು ವಾಹನದ ತಪಾಸಣೆ ನಡೆಸಿದೆ ಎಂದು ಅವರು ತಿಳಿಸಿದ್ದಾರೆ.

24 ವರ್ಷದ ಶಿಂದೆ ವಿರುದ್ಧ ಥಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯೊಂದರಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿರುವ ಆರೋಪವಿದೆ. ಆತನನ್ನು ಆಗಸ್ಟ್ 17ರಂದು ಬಂಧಿಸಲಾಗಿತ್ತು.

ಶಾಲೆಯ ಸ್ವಚ್ಛತಾ ಕಾರ್ಮಿಕನಾಗಿ ಕೆಲಸಕ್ಕೆ ಸೇರಿದ್ದ ಶಿಂದೆ, ನರ್ಸರಿಯ ಇಬ್ಬರು ಬಾಲಕಿಯರ ಮೇಲೆ ಶೌಚಾಲಯದಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿತ್ತು. ಪ್ರಕರಣವು ಮಹಾರಾಷ್ಟ್ರದಾದ್ಯಂತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಸೋಮವಾರ ಸಂಜೆ ಥಾಣೆಯ ಮುಂಬ್ರಾ ಬೈಪಾಸ್‌ ಸಮೀಪ ಪೊಲೀಸ್‌ ವಾಹನದಲ್ಲಿ ಕರೆದೊಯ್ಯುತ್ತಿದ್ದ ವೇಳೆ ಗುಂಡಿನ ಚಕಮಕಿಯಲ್ಲಿ ಹತ್ಯೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದರು. ಪಿಸ್ತೂಲ್ ಕಸಿದು ಶಿಂದೆ ಹಾರಿಸಿದ ಗಂಡೇಟು ಸಹಾಯಕ ಇನ್‌ಸ್ಪೆಕ್ಟರ್‌ಗೆ ತಗುಲಿತ್ತು ಎಂದು ಅವರು ತಿಳಿಸಿದರು.

ಪುತ್ರನ ಸಾವು ಪ್ರಕರಣದ ಕುರಿತು ತನಿಖೆ ನಡೆಸಲು ತಂದೆ ಅಣ್ಣಾ ಶಿಂದೆ ಮನವಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT