ನವದೆಹಲಿ: ನಾಗರಿಕ ಸೇವಾ ಪರೀಕ್ಷೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಿದ ನಂತರ, ಅವುಗಳನ್ನು ಹಿಂಪಡೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಹೇಳಿದೆ.

ನಾಗರಿಕ ಸೇವಾ ಪರೀಕ್ಷೆಗಳಿಗೆ ಸಂಬಂಧಿಸಿ ಇತ್ತೀಚೆಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ಆಯೋಗವು ಈ ಮಾಹಿತಿಯನ್ನು ನೀಡಿದೆ.

ಪ್ರಸಕ್ತ ಸಾಲಿನ ಪ್ರಿಲಿಮಿನರಿ ಪರೀಕ್ಷೆಗಳು ಮೇ 28ರಿಂದ ಆರಂಭವಾಗಲಿವೆ.

ಅಭ್ಯರ್ಥಿಗಳು ತಾವು ಸಲ್ಲಿಸಿದ ಅರ್ಜಿಗಳನ್ನು ಹಿಂಪಡೆಯಲು 2018ರಲ್ಲಿ ಯುಪಿಎಸ್‌ಸಿ ಅವಕಾಶ ನೀಡಿತ್ತು. ಆಗ, 10 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆ ಪೈಕಿ, ಶೇ 50ರಷ್ಟು ಅಭ್ಯರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಬಹುದು ಎಂದು ಅಂದಾಜಿಸಿದ್ದ ಯುಪಿಎಸ್‌ಸಿ, ಅರ್ಜಿ ಹಿಂಪಡೆಯಲು ಅವಕಾಶ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.