ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಬುಧವಾರ ನಡೆದ ಎರಡು ಪ್ರತ್ಯೇಕ ಉಗ್ರರ ದಾಳಿಯಲ್ಲಿ ಎಎಸ್‌ಐ ಹಾಗೂ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ.

ಶ್ರೀನಗರದ ಸಫಕದಾಲ್ ಬಡಾವಣೆಯ ನಿವಾಸಿ ರೂಫ್ ಅಹ್ಮದ್ ಖಾನ್ (45) ಉಗ್ರರ ದಾಳಿಗೆ ಬಲಿಯಾದವರು. ‘ತಮ್ಮ ನಿವಾಸದ ಮುಂದೆ ನಿಂತಿದ್ದ ರೂಫ್ ಅಹ್ಮದ್ ಅವರ ಮೇಲೆ ಅಪರಿಚಿತ ಉಗ್ರರು ಏಕಾಏಕಿ ನಡೆಸಿದ ಗುಂಡಿನ ದಾಳಿ ನಡೆಸಿದ್ದು, ಗಾಯಗೊಂಡ ರೂಫ್ ಅಹ್ಮದ್ ಅವರನ್ನು ಇಲ್ಲಿನ ಎಸ್‌ಎಂಎಚ್‌ಎಸ್ ಆಸ್ಪತ್ರೆಗೆ ದಾಖಲಿಸುವ ವೇಳೆಗೆ ಮೃತಪಟ್ಟಿದ್ದರು’ ಎಂದು ಪೊಲೀಸರು ತಿಳಿಸಿದರು.

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾ ಪ್ರದೇಶದಲ್ಲಿ ಬುಧವಾರ ಉಗ್ರರ ನಡೆಸಿದ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎಎಸ್‌ಐ ಮೊಹಮ್ಮದ್ ಅಶ್ರಫ್ ಅವರು ಮೃತಪಟ್ಟಿದ್ದಾರೆ.

‘ಎದೆ ಹಾಗೂ ಕತ್ತಿನ ಭಾಗಕ್ಕೆ ಗುಂಡೇಟು ಬಿದ್ದು ತೀವ್ರ ಗಾಯಗೊಂಡಿದ್ದ ಎಎಸ್‌ಐ ಅಶ್ರಫ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.