ತಿರುಪತಿ: ಆಂಧ್ರಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರಸ್ವಾಮಿ ದೇವಸ್ಥಾನಕ್ಕೆ ಇಂದು (ಭಾನುವಾರ) ಭೇಟಿ ನೀಡಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್ ಪ್ರಾರ್ಥನೆ ಸಲ್ಲಿಸಿದ್ದಾರೆ.
ತಿರುಮಲ ದೇವಾಲಯಕ್ಕೆ ಪತ್ನಿ ಜತೆ ಡಿ.ವೈ.ಚಂದ್ರಚೂಡ್ ಭೇಟಿ ನೀಡಿದ್ದಾರೆ.
ಬಳಿಕ ಡಿ.ವೈ.ಚಂದ್ರಚೂಡ್ ಅವರಿಗೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ವತಿಯಿಂದ ತಿರುಮಲ ಶ್ರೀವಾರಿ ದೇವರ ಚಿತ್ರ ಮತ್ತು ತೀರ್ಥ ಪ್ರಸಾದವನ್ನು ನೀಡಲಾಯಿತು.
ತಿರುಪತಿ ಲಾಡು ವಿವಾದ...
ತಿರುಪತಿಯ ಲಾಡು ಕಲಬೆರಕೆ ಪ್ರಕರಣವು ಹೆಚ್ಚಿನ ಚರ್ಚೆಗೆ ಗ್ರಾಸವಾಗಿದೆ. ಆಂಧ್ರಪ್ರದೇಶ ಸರ್ಕಾರವು ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸಿದೆ.
ಹಿಂದಿನ ವೈಎಸ್‌ಆರ್‌ಪಿಸಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಪ್ರಸಾದ 'ಲಾಡು' ತಯಾರಿಸಲು ಕಲಬೆರಕೆ ತುಪ್ಪವನ್ನು ಬಳಸಲಾಗಿತ್ತು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆರೋಪಿಸಿದ್ದರು.
ಟಿಟಿಡಿಗೆ ಪೂರೈಕೆಯಾಗಿದ್ದ ತುಪ್ಪದಲ್ಲಿ ಹಂದಿ ಮತ್ತು ಇತರ ಪ್ರಾಣಿಗಳ ಕೊಬ್ಬಿನ ಅಂಶ ಪತ್ತೆಯಾಗಿರುವ ಕುರಿತು ಗುಜರಾತ್‌ನ ಎನ್‌ಡಿಡಿಬಿ ಪ್ರಯೋಗಾಲಯದ ವರದಿಯನ್ನು ಟಿಡಿಪಿ ಪ್ರಕಟಿಸಿತ್ತು.