ನವದೆಹಲಿ: ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ, ಆಗಸ್ಟೀನ್ ಜಾರ್ಜ್ ಮಸಿಹ್ ಹಾಗೂ ಸಂದೀಪ್ ಮೆಹ್ತಾ ಅವರು, ಗುರುವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಸಂಖ್ಯೆ ಒಟ್ಟು 34. ಈ ಮೂವರು ಅಧಿಕಾರ ಸ್ವೀಕರಿಸುವುದರೊಂದಿಗೆ ನ್ಯಾಯಾಲಯವು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಣೆಗೆ ಅನುಕೂಲವಾಗಲಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಸೇರಿದಂತೆ ನ್ಯಾಯಮೂರ್ತಿಗಳು, ವಕೀಲರು ಈ ವೇಳೆ ಹಾಜರಿದ್ದರು.
ಶರ್ಮಾ ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಮಸಿಹ್ ಅವರು ರಾಜಸ್ಥಾನ ಹೈಕೋರ್ಟ್ ಹಾಗೂ ಮೆಹ್ತಾ ಅವರು ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ಈ ಮೂವರನ್ನು ನೇಮಕ ಮಾಡುವಂತೆ ಇದೇ ತಿಂಗಳ ಮೊದಲ ವಾರದಲ್ಲಿ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.