ಅಲಿಗಢ: ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ಬಂದಿರುವುದರಿಂದ ವಿ.ವಿ ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದರು.

‘ಕ್ಯಾಂಪಸ್’ ಅನ್ನು ಸ್ಫೋಟಿಸುವುದಾಗಿ ಕುಲಪತಿ ಸೇರಿದಂತೆ ವಿ.ವಿಯ ಎಲ್ಲಾ ಅಧಿಕಾರಿಗಳಿಗೆ ಬಾಂಬ್ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ. ಈ ಕುರಿತು ತನಿಖೆ ಆರಂಭಿಸಲಾಗಿದೆ.

‘ವಿ.ವಿ ಆವರಣ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಈ ಬೆದರಿಕೆಯನ್ನು ಲಘುವಾಗಿ ಪರಿಗಣಿಸುವುದಿಲ್ಲ’ ಎಂದು ಎಸ್ಪಿ ಮೃಗಾಂಕ್ ಶೇಖರ್ ಪಾಠಕ್ ತಿಳಿಸಿದರು.

ಹಣ ನೀಡುವಂತೆಯೂ ಬೆದರಿಕೆ ಸಂದೇಶದಲ್ಲಿ ಬೇಡಿಕೆ ಇರಿಸಲಾಗಿದೆ ಎಂದು ವಿ.ವಿಯ ವಕ್ತಾರ ಆಸೀಮ್ ಸಿದ್ದಿಕಿ ಹೇಳಿದ್ದಾರೆ.

23 ಶಾಲೆಗೆ ಬೆದರಿಕೆ: ವಿದ್ಯಾರ್ಥಿ ವಶಕ್ಕೆ

ನವದೆಹಲಿ: ಕಳೆದ ಕೆಲವು ದಿನಗಳಿಂದ ದೆಹಲಿಯ 23ಕ್ಕೂ ಹೆಚ್ಚು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ಆರೋಪದ ಮೇಲೆ 12ನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನಗೆ ಪರೀಕ್ಷೆ ಬರೆಯಲು ಇಷ್ಟವಿಲ್ಲದ ಕಾರಣ ಶಾಲೆಗೆ ರಜೆ ನೀಡಲಿ ಎಂಬ ಉದ್ದೇಶದಿಂದ ವಿದ್ಯಾರ್ಥಿ ಈ ರೀತಿ ಮಾಡಿದ್ದಾನೆ ಎನ್ನಲಾಗಿದೆ. ಇತ್ತೀಚೆಗೆ ದೆಹಲಿಯ ಅನೇಕ ಶಾಲೆಗಳಿಗೆ ನಿರಂತರವಾಗಿ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿದ್ದು ಗುರುವಾರದಂದು 10 ಶಿಕ್ಷಣ ಸಂಸ್ಥೆಗಳಿಗೆ ಸಂದೇಶಗಳು ಬಂದಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾಗ ಬಾಲಕ ಸಿಕ್ಕಿಬಿದ್ದಿದ್ದಾನೆ. ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು ಈತ 23ಕ್ಕೂ ಹೆಚ್ಚು ಶಾಲೆಗಳಿಗೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.