ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಟ: ವಿದ್ಯಾರ್ಥಿನಿ ಆತ್ಮಹತ್ಯೆ

Published : 18 ಸೆಪ್ಟೆಂಬರ್ 2024, 15:43 IST
Last Updated : 18 ಸೆಪ್ಟೆಂಬರ್ 2024, 15:43 IST
ಫಾಲೋ ಮಾಡಿ
Comments

ಜೈಪುರ: ರಾಜಸ್ಥಾನದ ಕೋಟ ನಗರದಲ್ಲಿ 19 ವರ್ಷದ ವಿದ್ಯಾರ್ಥಿನಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

12ನೇ ತರಗತಿಯ ವಿದ್ಯಾರ್ಥಿನಿ ಜಿಯಾ ಖಾಂಡೇಲ್‌ವಾಲ್ (19) ಆತ್ಮಹತ್ಯೆ ಮಾಡಿಕೊಂಡವರು. ವಿದ್ಯಾರ್ಥಿನಿಯ ತಂದೆ ವೈದ್ಯರಾಗಿದ್ದು, ನರ್ಸಿಂಗ್ ಹೋಂ ನಡೆಸುತ್ತಿದ್ದಾರೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್‌ ಠಾಣೆ ಅಧಿಕಾರಿ ಹರಿನಾರಾಯಣ್‌ ಶರ್ಮಾ ತಿಳಿಸಿದ್ದಾರೆ.

ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಟೇಲರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT