ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಒಡಿಶಾ: ಸಹಪಾಠಿಗೆ ಇರಿದ 9ನೇ ತರಗತಿ ವಿದ್ಯಾರ್ಥಿ ಬಂಧನ

Published 29 ಜೂನ್ 2024, 16:18 IST
Last Updated 29 ಜೂನ್ 2024, 16:18 IST
ಅಕ್ಷರ ಗಾತ್ರ

ಬರ್ಹಾಮ್‌ಪುರ /ಒಡಿಶಾ: ಒಡಿಶಾದ ಗಂಜಾಂ ಜಿಲ್ಲೆಯ ಶಾಲೆಯೊಂದರಲ್ಲಿ ತನ್ನ ಸಹಪಾಠಿಗೆ ಇರಿದ ಆರೋಪದಡಿ 9ನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ರಾಮಚಂದ್ರಾಪುರದ ರಘುನಾಥ ಪ್ರೌಢಶಾಲೆಯ ತರಗತಿಯೊಂದರಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮುಖ್ಯೋಪಾಧ್ಯಾಯ ರಘುನಾಥ ಮೊಹರಣ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು 14 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪಾತಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಜಯ್ ಕುಮಾರ್ ಸ್ವೈನ್ ತಿಳಿಸಿದ್ದಾರೆ.

ಇರಿತಕ್ಕೆ ಒಳಗಾದ ವಿದ್ಯಾರ್ಥಿ ಈಗ ಇಲ್ಲಿನ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಾಲಾ ಬ್ಯಾಗ್‌ನಲ್ಲಿ ಚಾಕು ಇಟ್ಟುಕೊಂಡಿದ್ದ ಬಾಲಕ, ಶಿಕ್ಷಕರು ಇಲ್ಲದಿರುವಾಗ ತರಗತಿಯಲ್ಲಿ ತನ್ನ ಸಹಪಾಠಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಅವರು ಹೇಳಿದರು.

‘ಘಟನೆಯು ಪ್ರೇಮ ಪ್ರಕರಣದ ಉದ್ದೇಶದಿಂದ ನಡೆದಿರಬಹುದು ಎಂದು ಆರಂಭಿಕವಾಗಿ ಊಹಿಸಲಾಗಿತ್ತು. ನಂತರದ ವಿಚಾರಣೆಯಲ್ಲಿ ಈ ಘಟನೆ ಹಠಾತ್ ಪ್ರಚೋದನೆಯಿಂದ ಸಂಭವಿಸಿದೆ’ ಎಂದು ಐಐಸಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT