ಚೆನ್ನೈ: ಮಾತೃಭಾಷೆ ಕೇವಲ ಪ್ರಾಚೀನತೆ ಹೊಂದಿರುವ ಭಾಷೆಯಲ್ಲ, ಅದು ಇತರ ಭಾಷೆಗಳ ಸಹಾಯವಿಲ್ಲದೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಶಕ್ತಿಯನ್ನು ಹೊಂದಿರುವ ಶಾಸ್ತ್ರೀಯ ಭಾಷೆಯಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.

ಅಂತರರಾಷ್ಟ್ರೀಯ ಮಾತೃಭಾಷಾ ದಿನದ ಅಂಗವಾಗಿ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ತಮಿಳು ಮಾತೃಭಾಷೆ ಕೇವಲ ಪ್ರಶಂಸನೀಯ ಪ್ರಾಚೀನತೆಯನ್ನು ಹೊಂದಿರುವ ಭಾಷೆಯಾಗಿರದೆ, ಇತರ ಭಾಷೆಗಳ ಸಹಾಯವಿಲ್ಲದೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಶಕ್ತಿಯನ್ನು ಹೊಂದಿರುವ ಶಾಸ್ತ್ರೀಯ ಭಾಷೆಯಾಗಿದೆ. ನಮ್ಮ ವಿಶಿಷ್ಟ ಶಾಸ್ತ್ರೀಯ ಭಾಷೆ ಪ್ರಪಂಚದಾದ್ಯಂತ ಹರಡಲಿ’ ಎಂದು ಬರೆದುಕೊಂಡಿದ್ದಾರೆ.

‘ಭಾಷಾ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಆಚರಿಸುವ ಅಂತರರಾಷ್ಟ್ರೀಯ ಮಾತೃಭಾಷಾ ದಿನದಂದು, ನಾವು ನಮ್ಮ ಮಾತೃಭಾಷೆ ತಮಿಳು ಮತ್ತು ಎಲ್ಲಾ ಭಾಷೆಗಳನ್ನು ಗೌರವಿಸುತ್ತೇವೆ. ಹಾಗೆಯೇ ನಮ್ಮ ಭಾಷೆಯನ್ನು ಸಮಾನತೆಯಿಂದ ಮಾತನಾಡುವವರ ಭಾವನೆಗಳನ್ನು ಗೌರವಿಸುತ್ತೇವೆ. ತಮಿಳರ ಮೇಲೆ ಬೇರೆ ಭಾಷೆಯನ್ನು ಹೇರುವ ಪ್ರಯತ್ನಗಳನ್ನು ಸಹಿಸುವುದಿಲ್ಲ’ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ.ಪಳನಿಸ್ವಾಮಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇತ್ತೀಚೆಗೆ ತ್ರಿಭಾಷಾ ಸೂತ್ರ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಒಪ್ಪಿಕೊಳ್ಳುವವರೆಗೆ ತಮಿಳುನಾಡಿಗೆ ಅನುದಾನ ಒದಗಿಸಲಾಗದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೀಡಿದ್ದಾರೆ ಎನ್ನಲಾದ ಹೇಳಿಕೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಖಂಡಿಸಿದ್ದರು. ಇಂತಹ ಬೆದರಿಕೆಯು ಸ್ವೀಕಾರಾರ್ಹವಲ್ಲ. ತಮಿಳುನಾಡು ಇಂತಹದನ್ನು ಸಹಿಸುವುದೂ ಇಲ್ಲ ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.