ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡರ್ಬಲ್ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಶ್ರೀನಗರ–ಲೇಹ್ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ.
ರಸ್ತೆಗಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿರುವುದರಿಂದ ಮುಂದಿನ ಆದೇಶದವರೆಗೆ ಶ್ರೀನಗರ –ಲೇಹ್ ಹೆದ್ದಾರಿಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಸಂಚಾರ ನಿಯಂತ್ರಣ ಕೇಂದ್ರ ತಿಳಿಸಿದೆ.
ಮೇಘಸ್ಫೋಟದಿಂದ ಕೆಲವು ಕಟ್ಟಡಗಳು, ಮನೆಗಳಿಗೆ ಹಾನಿಯಾಗಿದ್ದು ಪ್ರವಾಹ ಸ್ಥಿತಿ ಉಂಟಾಗಿದೆ. ಅಗತ್ಯವಿರುವವರಿಗೆ ನೆರವು ನೀಡಲು ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ. ಹೆದ್ದಾರಿ ಬಂದ್ ಆಗಿರುವ ಕಾರಣ ಲಡಾಖ್ ಕೇಂದ್ರಾಡಳಿತ ಪ್ರದೇಶದಿಂದ ಕಾಶ್ಮೀರಕ್ಕೆ ಸಂಪರ್ಕ ಕಡಿತಗೊಂಡಿದೆ. ಬಲ್ಟಾಲ್ ಬೇಸ್ ಕ್ಯಾಂಪ್‌ನಿಂದ ಅಮರನಾಥ ಯಾತ್ರೆಗೂ ತೆರಳುವಂತಿಲ್ಲ ಎಂದು ಆದೇಶ ಹೊರಡಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.