ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶದ ಯಶಸ್ಸನ್ನು ಪ್ರಧಾನಿ ಮೋದಿಗೆ ಅರ್ಪಿಸಿದ ಸಿಎಂ ಚೌಹಾಣ್

Published 3 ಡಿಸೆಂಬರ್ 2023, 7:52 IST
Last Updated 3 ಡಿಸೆಂಬರ್ 2023, 7:52 IST
ಅಕ್ಷರ ಗಾತ್ರ

ಭೋಪಾಲ್: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಅಧಿಕಾರದತ್ತ ದಾಪುಗಾಲಿಟ್ಟಿದೆ. 150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಈ ಯಶಸ್ಸಿನ ಶ್ರೇಯಸ್ಸನ್ನು ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಪ್ರಧಾನಿ ಮೋದಿಗೆ ನೀಡಿದ್ದಾರೆ.

ರಾಜ್ಯದ ಜನ ಅವರ ಮೇಲೆ ಅಪಾರ ನಂಬಿಕೆ ಇಟ್ಟಿದ್ದಾರೆ. ಡಬಲ್ ಎಂಜಿನ್ ಸರ್ಕಾರಗಳು ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿದ್ದರ ಪರಿಣಾಮ ಫಲಿತಾಂಶ ಬರುತ್ತಿದೆ ಎಂದು ಅವರು ಹೇಳಿದ್ದಾರೆ.

‘ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರು ಮಧ್ಯಪ್ರದೇಶದ ಜನರ ಹೃದಯದಲ್ಲಿದ್ದಾರೆ. ಈ ರಾಜ್ಯವೂ ಸಹ ಮೋದಿಜೀಯವರ ಹೃದಯದಲ್ಲಿದೆ. ರಾಜ್ಯದಲ್ಲಿ ಮೋದಿ ಅವರ ಬಗ್ಗೆ ಅಪಾರ ನಂಬಿಕೆ ಇದೆ. ಅವರು ಸಾರ್ವಜನಿಕ ರ್‍ಯಾಲಿಗಳನ್ನು ನಡೆಸಿ ಮಾಡಿದ ಮನವಿ ಜನರ ಹೃದಯವನ್ನು ಮುಟ್ಟಿದೆ. ಅದು ಫಲಿತಾಂಶದಲ್ಲಿ ವ್ಯಕ್ತವಾಗುತ್ತಿದೆ’ ಎಂದು ಚೌಹಾಣ್ ಹೇಳಿದ್ದಾರೆ.

ಚುನಾವಣಾ ಪ್ರಚಾರವು ಸರಿಯಾದ ದಿಕ್ಕಿನಲ್ಲಿ ಸಾಗಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅದ್ಬುತ ಕಾರ್ಯತಂತ್ರ, ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮಾರ್ಗದರ್ಶನ ಮತ್ತು ಪಕ್ಷದ ಕಾರ್ಯಕರ್ತರ ಪರಿಶ್ರಮ ಕೆಲಸ ಮಾಡಿದೆ ಎಂದು ಅವರು ಹೇಳಿದ್ದರೆ.

ರೈತರು, ಬಡವರು ಮತ್ತು ಯುವಕರ ಕಲ್ಯಾಣಕ್ಕಾಗಿ ಮಧ್ಯಪ್ರದೇಶ ಸರ್ಕಾರವು ಜಾರಿಗೆ ತಂದ ಲಾಡ್ಲಿ ಲಕ್ಷ್ಮಿ, ಲಾಡ್ಲಿ ಬೆಹನಾ ಕಾರ್ಯಕ್ರಮಗಳು ಕೆಲಸ ಮಾಡಿವೆ. ಅವು ಜನರ ಹೃದಯ ಮುಟ್ಟಿವೆ ಎಂದು ಹೇಳಿದ್ದಾರೆ.

‘ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಮೊದಲೇ ಹೇಳಿದ್ದೆ, ಈಗ ಅದೇ ಆಗುತ್ತಿದೆ’ ಎಂದು ಚೌಹಾಣ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT