ನವದೆಹಲಿ: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಇಂದು ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಅವರೊಂದಿಗೆ ಸಚಿವರಾದ ಸಾ.ರಾ ಮಹೇಶ್, ಬಂಡೆಪ್ಪ ಕಾಶೆಂಪುರ ಇದ್ದರು.

ಸಚಿವ ಸಹೋದ್ಯೋಗಿಗಳೊಂದಿಗೆದೆಹಲಿಯ ರಾಹುಲ್ ನಿವಾಸಕ್ಕೇ ತೆರಳಿದ ಎಚ್.ಡಿ ಕುಮಾರಸ್ವಾಮಿ ಹಲವು ಹೊತ್ತು ಚರ್ಚೆ ನಡೆಸಿದರು. ಪ್ರಸ್ತುತ ರಾಜಕಾರಣದ ಬಗ್ಗೆ ಇಬ್ಬರೂ ನಾಯಕರು ಮಾತನಾಡಿದ್ದಾರೆ. ರಾಜ್ಯದಲ್ಲಿರುವ ಮೈತ್ರಿ ಸರ್ಕಾರವೂ ಸದ್ಯ ಸುಗಮವಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ಕುಮಾರಸ್ವಾಮಿ ಅವರು ರಾಹುಲ್ ಗಾಂಧಿ ಅವರಿಗೆ ತಿಳಿಸಿದ್ದಾರೆ.

ಅಲ್ಲದೆ, ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನ ತೊರೆಯದಂತೆಯೂ, ರಾಷ್ಟ್ರಕ್ಕೆ ತಮ್ಮ ಸೇವೆ ಅಗತ್ಯವಿದೆ ಎಂಬುದಾಗಿಯೂ ಕುಮಾರಸ್ವಾಮಿ ಅವರು ರಾಹುಲ್ ಗಾಂಧಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.