ಅಮರಾವತಿ: ವೈಎಸ್‌ಆರ್‌ಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳ ಪ್ರಚಾರಕ್ಕಾಗಿ ರಾಜ್ಯದಾದ್ಯಂತ 21 ದಿನಗಳ ಕಾಲ ಬಸ್ ಯಾತ್ರೆ ಕೈಗೊಳ್ಳಲಿದ್ದಾರೆ.

ಇದೇ 26 ಅಥವಾ 27ರಂದು ಈ ಯಾತ್ರೆ ಆರಂಭವಾಗಲಿದೆ. ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಈ ಯಾತ್ರೆ ನಡೆಯಲಿದೆ.

‘ಚುನಾವಣಾ ಪ್ರಚಾರದ ಭಾಗವಾಗಿ ಜಗನ್ ಮೋಹನ್ ರೆಡ್ಡಿ ಅವರು ಬಸ್ ಯಾತ್ರೆ ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ಯಾತ್ರೆಯಲ್ಲಿ ಬೆಳಿಗ್ಗೆ ಜನರೊಂದಿಗೆ ಸಂವಾದ ಮತ್ತು ಮಧ್ಯಾಹ್ನ ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ’ ಎಂದು ಮುಖ್ಯಮಂತ್ರಿ ಕಚೇರಿಯು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಆಂಧ್ರಪ್ರದೇಶದಲ್ಲಿ ಮೇ 13ರಂದು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.