ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಫಲಿತಾಂಶದ ಬಳಿಕ ಉತ್ತರಾಖಂಡ ಸಿಎಂ ಸ್ಥಾನಕ್ಕೆ ಧಾಮಿ ರಾಜೀನಾಮೆ

Last Updated 11 ಮಾರ್ಚ್ 2022, 10:41 IST
ಅಕ್ಷರ ಗಾತ್ರ

ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹಾಗೂ ಸಚಿವ ಸಂಪುಟ ಸದಸ್ಯರು ರಾಜ್ಯಪಾಲ ಗುರ್ಮಿತ್ ಸಿಂಗ್ ಅವರಿಗೆ ಇಲ್ಲಿನ ರಾಜಭವನದಲ್ಲಿ ಶುಕ್ರವಾರ (ಮಾ.11) ರಾಜೀನಾಮೆ ಸಲ್ಲಿಸಿದ್ದಾರೆ. ಹಾಗೆಯೇ, ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸುವವರೆಗೆ ಸಿಎಂ ಸ್ಥಾನದಉಸ್ತುವಾರಿ ನೋಡಿಕೊಳ್ಳುವುದಾಗಿ ಧಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ನಾವು ಬಹುಮತ ಪಡೆದುಕೊಂಡಿದ್ದೇವೆ. ಸದ್ಯದ ಅಧಿಕಾರಾವಧಿ ಮುಗಿದಿದ್ದು, ನನ್ನ ಸಚಿವ ಸಂಪುಟ ಮತ್ತು ನಾನು ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲಗುರ್ಮಿತ್ ಸಿಂಗ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದೇವೆ' ಎಂದು ತಿಳಿಸಿದ್ದಾರೆ.

ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾ ವಿಧಾನಸಭೆ ಚುನಾವಣೆ ಫಲಿತಾಂಶ ಗುರುವಾರ (ಮಾ.10) ಪ್ರಕಟವಾಗಿದೆ.

70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. 2017ರ ಚುನಾವಣೆಗಿಂತ ಶೇ 2ರಷ್ಟು ಕಡಿಮೆ ಮತಗಳು ಬಂದಿದ್ದರೂ, 47 ಕ್ಷೇತ್ರಗಳಲ್ಲಿ ಜಯ ದಾಖಲಿಸಿದೆ. ಕಳೆದ ಬಾರಿ ಶೇ 46.51ರಷ್ಟು ಮತ ಪಡೆದಿದ್ದ ಬಿಜೆಪಿ, 57 ಕ್ಷೇತ್ರಗಳಲ್ಲಿ ಗೆದ್ದು ಬೀಗಿತ್ತು. ಈ ಬಾರಿ ಅದರ ಮತ ಗಳಿಕೆ ಪ್ರಮಾಣಶೇ 44.33ಕ್ಕೆ ಕುಸಿದಿದೆ.

ಖತಿಮಾ ಕ್ಷೇತ್ರದಿಂದ ಸ್ಪರ್ಧಿಸಿದ್ದಪುಷ್ಕರ್ ಸಿಂಗ್ ಧಾಮಿ ಕಾಂಗ್ರೆಸ್‌ ಅಭ್ಯರ್ಥಿ ಭುವನ್ ಚಂದ್ರ ಕಪ್ರಿ ವಿರುದ್ಧ 6,579 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಧಾಮಿ 41,598 ಮತ ಪಡೆದರೆ, ಭುವನ್ ಚಂದ್ರ48,177 ಮತ ಗಳಿಸಿದ್ದರು.

ಬಿಜೆಪಿ ಶಾಸಕರಾದ ಕೈಲಾಶ್ ಗಹ್ಟೋರಿ ಮತ್ತು ಸುರೇಶ್ ಗದಿಯಾ ಅವರು ಧಾಮಿಗಾಗಿ ತಮ್ಮ ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ಹೇಳಿಕೊಂಡಿದ್ದಾರೆ.

ಚುನಾವಣೆಯಲ್ಲಿಕಾಂಗ್ರೆಸ್ 19 ಕ್ಷೇತ್ರಗಳಲ್ಲಿ ಜಯದ ನಗೆ ಬೀರಿದೆ. ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಲಾಲ್‌ಕುವಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮೋಹನ್ ಸಿಂಗ್ ಬಿಸ್ತ್‌ ಎದುರು17,527 ಮತಗಳ ಅಂತರದ ಸೋಲು ಕಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT