ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಲ್ಲಿ ತರಬೇತಿ ಪಡೆಯಲು ಮಣಿಪುರದ ಕ್ರೀಡಾಪಟುಗಳಿಗೆ ಸ್ಟಾಲಿನ್ ಆಹ್ವಾನ

Published 23 ಜುಲೈ 2023, 10:33 IST
Last Updated 23 ಜುಲೈ 2023, 10:33 IST
ಅಕ್ಷರ ಗಾತ್ರ

ಚೆನ್ನೈ: ಖೇಲೊ ಇಂಡಿಯಾ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಮಣಿಪುರ ಕ್ರೀಡಾಪಟುಗಳಿಗೆ ತಮಿಳುನಾಡಿನಲ್ಲಿ ತರಬೇತಿ ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಆಹ್ವಾನ ನೀಡಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಸ್ಟಾಲಿನ್‌, 'ವಿಶ್ವದರ್ಜೆಯ ಕ್ರೀಡಾಪಟುಗಳನ್ನು ಈಶಾನ್ಯ ರಾಜ್ಯಗಳು ನೀಡಿವೆ. ಅದರಲ್ಲಿಯೂ ಮಹಿಳಾ ಕ್ರೀಡಾ ಸಾಧಕರಿಗೆ ಮಣಿಪುರ ಹೆಸರುವಾಸಿಯಾಗಿದೆ. ಅನೇಕ ಕ್ರೀಡಾಪಟುಗಳನ್ನು ನೀಡಿದ ರಾಜ್ಯದ ಸ್ಥಿತಿ ಇಂದು ಚಿಂತಾಜನಕವಾಗಿದೆ. ಅಲ್ಲಿನ ಕ್ರೀಡಾಪಟುಗಳು ತಮಿಳುನಾಡಿನಲ್ಲಿ ತರಬೇತಿ ಪಡೆದುಕೊಳ್ಳಬಹುದು' ಎಂದು ತಿಳಿಸಿದರು.

'ಮಣಿಪುರದ ಕ್ರೀಡಾಪಟುಗಳಿಗೆ ಅಲ್ಲಿನ ಪರಿಸ್ಥಿತಿ ಅನುಕೂಲಕರವಾಗಿಲ್ಲ. ಹಾಗಾಗಿ ತಮಿಳುನಾಡಿನಲ್ಲಿ ತರಬೇತಿ ಪಡೆಯಲಿಚ್ಛಿಸುವ ಮಣಿಪುರದ ಕ್ರೀಡಾಪಟುಗಳಿಗೆ ಎಲ್ಲ ಅವಕಾಶ ಕಲ್ಪಿಸಿಕೊಡುವಂತೆ ಕ್ರೀಡಾ ಸಚಿವ ಉದಯನಿಧಿ ಅವರಿಗೆ ಸೂಚನೆ ನೀಡಲಾಗಿದೆ' ಎಂದು ತಿಳಿಸಿದ್ದಾರೆ.

'ಮಣಿಪುರದ ಕ್ರೀಡಾಪಟುಗಳು ತಮ್ಮ ಹೆಸರು, ವಿಳಾಸ, ಗುರುತಿನ ಚೀಟಿ ಜೊತೆ ತರಬೇತಿಗೆ ಅಗತ್ಯವಿರುವ ಕ್ರೀಡಾ ಸಲಕರಣೆಗಳೊಂದಿಗೆ sportstn2023@gmail.com ಅಥವಾ +91 8925903047 ಅನ್ನು ಸಂಪರ್ಕಿಸಬಹುದಾಗಿದೆ. ಆ ಮೂಲಕ ತಮಿಳುನಾಡು ಕ್ರೀಡಾ ಅಭಿವೃದ್ದಿ ಪ್ರಾಧಿಕಾರದಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಳ್ಳಬಹುದು' ಎಂದು ಹೇಳಿದ್ದಾರೆ.

ಮುಂದಿನ ವರ್ಷ ನಡೆಯಲಿರುವ 'ಖೇಲೊ ಇಂಡಿಯಾ' ಕ್ರೀಡಾಕೂಟದ ಆತಿಥ್ಯವನ್ನು ತಮಿಳುನಾಡು ವಹಿಸಿಕೊಳ್ಳಲಿದೆ. ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಕಳೆದೆರಡು ದಿನಗಳಲ್ಲಿ ರಾಜ್ಯದಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಶಿಕ್ಷಣ, ಕ್ರೀಡಾ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರಗಳ ಮೇಲೂ ಹಿಂಸಾಚಾರ ಪರಿಣಾಮ ಬೀರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT